ಜ.27 ರಿಂದ ಮೂರು ದಿನ `ಹಂಪಿ ಉತ್ಸವ’ – Vishwanews24
ಜ.27 ರಿಂದ ಮೂರು ದಿನ `ಹಂಪಿ ಉತ್ಸವ’
ಹೊಸಪೇಟೆ : ವಿಶ್ವಪಾರಂಪರಿಕ ತಾಣ, ವಿಶ್ವವಿಖ್ಯಾತ ಹಂಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿಜಯನಗರ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಜ.27ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಯಲಿದೆ.
ಹಂಪಿ ಉತ್ಸವದ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಲಾ ಪ್ರದರ್ಶನಗಳು, ಸಮಾರಂಭಗಳು ಹಂಪಿಯ ನಾಲ್ಕು ವೇದಿಕೆಗಳಲ್ಲಿ ನಡೆಯಲಿದೆ. ಎಂ.ಪಿ.ಪ್ರಕಾಶ್ ನಗರದಲ್ಲಿರುವ ಗಾಯಿತ್ರಿ ಪೀಠವು ಹಂಪಿ ಉತ್ಸವದ ಮುಖ್ಯ ವೇದಿಕೆ ಆಗಿರುತ್ತದೆ. ಹಾಗೂ ಉಳಿದಂತೆ ಎದುರು ಬಸವಣ್ಣ ವೇದಿಕೆ, ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ ವೇದಿಕೆ ಹಾಗೂ ಸಾಸುವೆಕಾಳು ಗಣಪ ವೇದಿಕೆಗಳಲ್ಲಿ ಸತತ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಮುಖ್ಯ ವೇದಿಕೆಯಾದ ಗಾಯಿತ್ರಿ ಪೀಠದಲ್ಲಿ ಜ.27ರಂದು ಸಂಜೆ 6 ಗಂಟೆಗೆ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಘನಉಪಸ್ಥಿತಿ ವಹಿಸಲಿದ್ದಾರೆ. ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಶಾಸ್ತç ಇಲಾಖೆ ಸಚಿವರಾದ ಆನಂದ್ ಸಿಂಗ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸುವರು.
ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಆರ್.ಆಶೊಕ್, ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು, ಗೃಹ ಸಚಿವರಾದ ಅರಗ ಜ್ಞಾನೇಂದ್ರ, ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ.ಸುನೀಲ್ ಕುಮಾರ್ ಹಾಗೂ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್ ಉಪಸ್ಥಿತರಿರುವರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಳ್ಳಾರಿ ಸಂಸದರಾದ ವೈ. ದೇವೇಂದ್ರಪ್ಪ, ದಾವಣಗೆರೆ ಸಂಸದರಾದ ಜಿ.ಎಂ.ಸಿದ್ಧೇಶ್ವರ, ಹೂವಿನಹಡಗಲಿ ಶಾಸಕರಾದ ಪಿ.ಟಿ.ಪರಮೇಶ್ವರ ನಾಯ್ಕ, ಕೂಡ್ಲಿಗಿ ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಹಗರಿಬೊಮ್ಮನಹಳ್ಳಿ ಶಾಸಕರಾದ ಭೀಮಾನಾಯ್ಕ ಎಲ್.ಬಿ.ಪಿ, ಹರಪನಹಳ್ಳಿ ಶಾಸಕರಾದ ಜಿ.ಕರುಣಾಕರ ರೆಡ್ಡಿ, ಜಗಳೂರು ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ, ವಿಧಾನಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಕಮಲಾಪುರ ಪುರಸಭೆ ಅಧ್ಯಕ್ಷರಾದ ಸಯ್ಯದ್ ಅಮಾನುಲ್ಲಾ ಹಾಗೂ ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿ.ಡಿ.ಹೇಮಗಿರಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಅಪರ ಮುಖ್ಯ ಕಾರ್ಯದರ್ಶಿಗಳಾದ ಕಪಿಲ್ ಮೋಹನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳಾದ ಡಾ.ಎನ್.ಮಂಜುಳಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ತುಲಸಿ ಮದ್ದಿನೇನಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಬಾಜಪೇಯಿ, ವಿಜಯನಗರ ವಲಯ ಪೊಲೀಸ್ ಮಹಾ ನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ವಿ.ರಾಮ್ ಪ್ರಸಾತ್ ಮನೋಹರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಹೊಸಪೇಟೆ ನಗರಸಭೆ ಅಧ್ಯಕ್ಷರಾದ ಸುಂಕಮ್ಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ್ ಜೀರೆ, ಹಂಪಿಯ ಶ್ರೀ ವಿರೂಪಾಕ್ಷ ವಿದ್ಯಾರಣ್ಯ ಮಠದ ವಿದ್ಯಾರಣ್ಯ ಭಾರತಿ ಸ್ವಾಮೀಜಿ, ಹಂಪಿ ಹೇಮಕೂಟ ಸಿಂಹಾಸನಾಧೀಶ್ವರ ಜಗದ್ಗುರು ಕೊಟ್ಟೂರು ಬಸವಲಿಂಗ ಸ್ವಾಮೀಜಿ, ಗಾಯಿತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ಹಾಗೂ ಆನೆಗುಂದಿ ರಾಜವಂಶಸ್ಥ ಶ್ರೀ ಕೃಷ್ಣದೇವರಾಯ ಅವರು ಪಾಲ್ಗೊಳ್ಳಲಿದ್ದಾರೆ.
ಹಾಗೂ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಶ್ರೀಹರಿ ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಬೋಯರ್ ಹರ್ಷಲ್ ನಾರಾಯಣರಾವ್ ಭಾಗಿಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಸೇನೆಯಲ್ಲಿ ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – Vishwanews24
