ಜ.27 ಸಿಎಎ ಪರ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಮಂಗಳೂರಿಗೆ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಸಿಎಎ ಮತ್ತು ಎನ್‌ಆರ್‌ಸಿ ಪರವಾಗಿ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜ. 27ರ ಮಧ್ಯಾಹ್ನ ಮಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಸಮರ್ಥನಾ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಭಾಗವಹಿಸುವ ನಿರೀಕ್ಷೆಯಿದೆ.

ಕೂಳೂರಿನ ಗೋಲ್ಡ್‌ಪಿಂಚ್‌ ಮೈದಾನದಲ್ಲಿ ಮಧ್ಯಾಹ್ನ 3ರ ಸುಮಾರಿಗೆ ಸಮಾವೇಶ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಈ ಕುರಿತ ಅಂತಿಮ ತಯಾರಿ ಮಾಡಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅಥವಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಆಹ್ವಾನಿಸಿ ಸಮಾವೇಶ ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಈ ಪೈಕಿ ರಕ್ಷಣಾ ಸಚಿವರು ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292