ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರ್ಪಡೆ – vishwanews24

Featured, ರಾಷ್ಟ್ರ ನ್ಯೂಸ್

ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರ್ಪಡೆ

ಹೈದರಾಬಾದ್: ವೈಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈಎಸ್ ಶರ್ಮಿಳಾ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಶರ್ಮಿಳಾ ಅವರು ಬುಧವಾರ ತಡರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಶರ್ಮಿಳಾ ಅವರಿಗೆ ಪಕ್ಷದ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಪಸ್ಥಿತರಿದ್ದರು.

ಹೈದರಾಬಾದ್‌ನಲ್ಲಿ ಮಂಗಳವಾರ ನಡೆದ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿದ ನಂತರ, ಶರ್ಮಿಳಾ ಅವರು ಮತ್ತು ಇತರ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಭೇಟಿ ಮಾಡಿ ದೆಹಲಿಯಲ್ಲಿ “ನಿರ್ಣಾಯಕ” ಘೋಷಣೆ ಮಾಡುವುದಾಗಿ ಹೇಳಿದ್ದರು.

ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ – vishwanews24

ಶರ್ಮಿಳಾ ಅವರು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿಯಾಗಿದ್ದಾರೆ.

ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್‌ನ ಭ್ರಷ್ಟ ಮತ್ತು ಜನವಿರೋಧಿ ಆಡಳಿತವನ್ನು ಕೊನೆಗೊಳಿಸಲು ಶರ್ಮಿಳಾ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು ಅದರಂತೆ ಇಂದು ಪಕ್ಷದ ಹಿರಿಯರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬಲಪಡಿಸುವ ಪಣ ತೊಟ್ಟಿದ್ದಾರೆ.

ಉಡುಪಿ : ಹಿರಿಯ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಬಿ. ಸುಧಾಕರ್ ಶೆಟ್ಟಿ ನಿಧನ – vishwanews24

Leave a Reply