ಜನಸಾಮಾನ್ಯರ ಶ್ರೇಯೋಭಿವೃದ್ದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉತ್ಸುಕತೆ ತೋರಬೇಕು : ಸುನಿಲ್ ಕುಮಾರ್ – Vishwanews24
ಜನಸಾಮಾನ್ಯರ ಶ್ರೇಯೋಭಿವೃದ್ದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉತ್ಸುಕತೆ ತೋರಬೇಕು : ಸುನಿಲ್ ಕುಮಾರ್ – Vishwanews24
ಮಂಗಳೂರು: ಜನಸಾಮಾನ್ಯರ ಶ್ರೇಯೋಭಿವೃದ್ದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳನ್ನು ಮುಂದಿನ ಒಂದೂವರೆ ವರ್ಷ ಜನರಿಗೆ ತಲುಪಿಸುವ ಕೆಲಸವನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಟ್ಟಾಗಿ ನಿರ್ವಹಿಸುವ ಉತ್ಸುಕತೆ ತೋರಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರು ಕರೆ ನೀಡಿದರು.
ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ ಅಸ್ತಿತ್ವಕ್ಕೆ ಬಂದು ಇಂದಿಗೆ ಆರು ತಿಂಗಳು ಪೂರ್ಣಗೊಂಡಿವೆ, ಇನ್ನೂ ಬಾಕಿ ಉಳಿದಿರುವ ಒಂದೂವರೆ ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರವು ಜನರ ಕಲ್ಯಾಣಕ್ಕಾಗಿ ರೂಪಿಸಿರುವ ಹಲವು ಜನಪರ ಹಾಗೂ ಜನಪ್ರಿಯ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಲು ಸಿದ್ದರಾಗುವಂತೆ ಅವರು ತಾಕೀತು ಮಾಡಿದರು.
ವಿಧಾನಸಭೆಯ ಸದಸ್ಯರಾಗಿ ಮೂರನೇ ಬಾರಿ ಆಯ್ಕೆಯಾಗಿರುವ ತಮಗೆ ತಾಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಉದ್ಭವವಾಗುವ ಸಮಸ್ಯೆಗಳ ಬಗ್ಗೆ ಆಳವಾದ ಅರಿವಿದೆ, ಈ ಜಿಲ್ಲೆಯಲ್ಲಿರುವ ಆ ಸಮಸ್ಯೆಗಳು ಮುಂದಿನ ಒಂದೂವರೆ ವರ್ಷದಲ್ಲಿ ಬಗೆಹರಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಂಡದಂತೆ ಸರ್ಕಾರಕ್ಕೆ ಗೌರವ ತರುವ ರೀತಿಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಒಳ್ಳೆಯ ಹಾಗೂ ಉತ್ತಮ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಬೇಕು ಎಂದರು.
ಕೊರೊನಾ ರೂಲ್ಸ್ ಸಡಿಲಿಕೆ : ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ – Vishwanews24
ಜಿಲ್ಲೆಯ ಸಹಾಯಕ ಆಯುಕ್ತರು, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಆರೋಗ್ಯ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
