ಜನಾಕ್ರೋಶದ ಬಿಸಿ ರಾಜ್ಯ ಸರಕಾರಕ್ಕೆ ತಟ್ಟಿದೆ : ಬಿ.ವೈ.ವಿಜಯೇಂದ್ರ – vishwanews24
ಜನಾಕ್ರೋಶದಿಂದ ಪ್ರತಿ ಜಿಲ್ಲೆಯಲ್ಲಿ ಉತ್ಸಾಹ ಮತ್ತು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ : ಬಿ.ವೈ.ವಿಜಯೇಂದ್ರ
ದಾವಣಗೆರೆ: ಮೂರನೇ ಹಂತದ ಜನಾಕ್ರೋಶ ಯಾತ್ರೆಯು ಇಂದು ಆರಂಭವಾಗಲಿದ್ದು, ದಾವಣಗೆರೆ, ಹಾವೇರಿ ಜಿಲ್ಲೆಯ ಮೂಲಕ ನಾಳೆ ಗದಗ, ಕೊಪಳ ಜಿಲ್ಲೆಗೆ ನಮ್ಮ ಯಾತ್ರೆ ತೆರಳಲಿದೆ. ಈ ಹಂತದಲ್ಲಿ 10 ಜಿಲ್ಲೆಗಳಿಗೆ ಭೇಟಿ ಕೊಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಉತ್ಸಾಹ ಹೆಚ್ಚಾಗಿದೆ ಮತ್ತು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿಗಳೂ ಗೊಂದಲದಲ್ಲಿದ್ದಾರೆ. ಗ್ಯಾರಂಟಿಗಳ ಭ್ರಮೆಯಲ್ಲಿದ್ದ ಮುಖ್ಯಮಂತ್ರಿಗಳು ವಾಸ್ತವಿಕ ಸತ್ಯವನ್ನು ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಮಗುಚಿ ಬಿದ್ದ ಕಾರು – vishwanews24
ಮುಖ್ಯಮಂತ್ರಿಗಳು ಮತ್ತು ಸಚಿವರು ಬೆಂಗಳೂರಿಗೆ ಸೀಮಿತವಾಗಿದ್ದಾರೆ ಎಂದು ಮೊದಲ ಹಂತದಲ್ಲೇ ಹೇಳಿದ್ದೆ. ಇದರ ಬಳಿಕ ಮುಖ್ಯಮಂತ್ರಿಗಳು ಎಚ್ಚತ್ತುಕೊಂಡಿದ್ದಾರೆ ಎಂಬ ಭಾವನೆ ನನ್ನದು ಎಂದರು. ಅದಾದ ಬಳಿಕ ಬೆಳಗಾವಿ ಪ್ರವಾಸ, ಬೇರೆ ಬೇರೆ ಜಿಲ್ಲೆಗಳ ಪ್ರವಾಸ ನಿಗದಿಯಾಗಿದೆ. ಜನಾಕ್ರೋಶದ ಬಿಸಿ ರಾಜ್ಯ ಸರಕಾರಕ್ಕೆ ತಟ್ಟಿದೆ ಎಂದು ವಿಶ್ಲೇಷಿಸಿದರು.
