ಜಾಲತಾಣಗಳಲ್ಲಿ ಮಕ್ಕಳ ಕಳ್ಳರ ಸುಳ್ಳು ಸುದ್ದಿ – ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ: ಉಡುಪಿ ಎಸ್ಪಿ – Vishwanews24
ಜಾಲತಾಣಗಳಲ್ಲಿ ಮಕ್ಕಳ ಕಳ್ಳರ ಸುಳ್ಳು ಸುದ್ದಿ – ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ: ಉಡುಪಿ ಎಸ್ಪಿ
ಉಡುಪಿ : ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ನಗರ, ಗ್ರಾಮ, ಮತ್ತು ಸುತ್ತುಮುತ್ತಲಿನ ಪುದೇಶಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಕ್ಷಯ್ ಎಂ ಹಾಕೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂದಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ನಗರ, ಗ್ರಾಮ ಮತ್ತು ಸುತ್ತುಮುತ್ತಲಿನ ಪುದೇಶಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ, ಇದರಿಂದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಕೂಲಂಕುಶವಾಗಿ ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ
ಹಾಗೂ ಮಕ್ಕಳ ಕಳ್ಳತನದ ಬಗ್ಗೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದ್ದಾರೆ.
ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಪತ್ತೆ : ಪೊಲೀಸರಿಗೊಪ್ಪಿಸಿದ ಸ್ಥಳೀಯ ಯುವಕರು – Vishwanews24
