ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ
ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್
ಬೆಂಗಳೂರು: ಗೃಹಜ್ಯೋತಿ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ. ಅನರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗಬಾರದೆಂದು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ಆಪರೇಷನ್ ಗೃಹಜ್ಯೋತಿ ಶುರುವಾಗಿದೆ.
ಹೀಗಾಗಿ ಜುಲೈನಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ. ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ನೀಡಲು ಬೆಸ್ಕಾಂ ಮುಂದಾಗಿದೆ.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24
ಈ ಕುರಿತಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್ಗಳನ್ನು ನಿಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.
ಇನ್ನು ಮೀಟರ್ ರೀಡಿಂಗ್ ಬದಲಾಗಿ, ಗ್ರಾಹಕರಿಗೆ ಜುಲೈ ತಿಂಗಳಲ್ಲಿ ಸರಾಸರಿ ಬಿಲ್ ನೀಡಲಾಗುತ್ತದೆ. ಅಂದರೆ ಕಳೆದ 3 ತಿಂಗಳ ನಿಮ್ಮ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಅನ್ನು ಸಿದ್ಧಪಡಿಸಲಾಗುತ್ತದೆ.
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24
ಯಾರಿಗೆಲ್ಲಾ ಅನ್ವಯ?
ಈ ಹೊಸ ನಿಯಮವು ಹೆಚ್.ಟಿ ಗ್ರಾಹಕರು, 40 ಹೆಚ್.ಪಿ ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್.ಟಿ ಗ್ರಾಹಕರು, ಸೋಲಾರ್ ರೂಫ್ಟಾಪ್ ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ. ಈ ಗ್ರಾಹಕರಿಗೆ ಎಂದಿನಂತೆ ನಿಯಮಿತವಾಗಿ ಮೀಟರ್ ರೀಡಿಂಗ್ ಮಾಡಿ ಬಿಲ್ ನೀಡಲಾಗುವುದು ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಮಾಹಿತಿ ನೀಡಿದೆ.
