ಜೂ.16, 17 ಮತ್ತು 18ರಂದು ಕೆ-ಸಿಇಟಿ ಪರೀಕ್ಷೆ  ; ವೇಳಾಪಟ್ಟಿ ಪ್ರಕಟ – Vishwanews24

Featured, ರಾಜ್ಯ ನ್ಯೂಸ್

ಜೂ.16, 17 ಮತ್ತು 18ರಂದು ಕೆ-ಸಿಇಟಿ ಪರೀಕ್ಷೆ  ; ವೇಳಾಪಟ್ಟಿ ಪ್ರಕಟ – Vishwanews24

ಬೆಂಗಳೂರು: ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ  ಹೇಳಿದ್ದಾರೆ.

ಈ ಬಗ್ಗೆ ಸೋಮವಾರ ಮಾತನಾಡಿದ ಅವರು, ಬೇರೆಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

CET2022 ಪ್ರಸ್ತಾವಿತ ವೇಳಾಪಟ್ಟಿ ಇಂತಿದೆ

16/06/2022 – ಜೀವಶಾಸ್ತ್ರ, ಗಣಿತ

17/06/2022 – ಭೌತಶಾಸ್ತ್ರ, ರಸಾಯನಶಾಸ್ತ್ರ

18/06/2022 – ಕನ್ನಡ (ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ)

ಏಪ್ರಿಲ್ 5ರಿಂದ 20ರವರೆಗೆ ಸಿಇಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಮೂಲಕವೇ ನಿಗದಿತ ಶುಲ್ಕ ಸಲ್ಲಿಸಲು ಏ.22ರವರೆಗೆ ಅವಕಾಶವಿದೆ.

ಶುಲ್ಕ ಪಾವತಿಸಿದ ನಂತರ, ತಮ್ಮ ಅರ್ಜಿಯಲ್ಲೇನಾದರೂ ಮಾಹಿತಿಯನ್ನು ಪರಿಷ್ಕರಿಸುವುದಿದ್ದರೆ ಅಂಥವರಿಗೇ ಮೇ 2ರಿಂದ 6ವರೆಗೆ ಕಾಲಾವಕಾಶ ಇರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಸಚಿವರು ವಿವರಿಸಿದ್ದಾರೆ.

PAN ಕಾರ್ಡ್‌ದಾರರಿಗೆ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ಮಾರ್ಚ್ 31 ಕೊನೆಯ ದಿನ : ಇಲ್ಲದಿದ್ದರೆ ನಿಮ್ಮ ಪಾನ್ ಕಾರ್ಡ್ ನಿಷ್ಕ್ರಿಯ – Vishwanews24

Leave a Reply