ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್.ವಿಶ್ವನಾಥ್ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿನ ಸೋಲಿಗೆ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಮಂಗಳವಾರ ರಾಜೀನಾಮೆ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದರು. ಅಲ್ಲದೇ ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡರಿಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಸುಮಾರು ನಾಲ್ಕು ಪುಟಗಳ ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಸಿದ್ದರಾಮಯ್ಯ ಅವರ ವಿರುದ್ಧ ವಿಶ್ವನಾಥ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮನ್ವಯ ಸಮಿತಿ ಕೇವಲ ನಾಮಕಾವಸ್ಥೆ. ಸಮನ್ವಯ ಸಮಿತಿ ಸಿದ್ದು ಕೈಗೊಂಬೆಯಾಗಿದೆ.

ಸಮನ್ವಯ ಸಮಿತಿಯಲ್ಲಿ ನನಗೆ ಅವಕಾಶವೇ ಕೊಡಲಿಲ್ಲ. ಎಲ್ಲವೂ ಸಿದ್ದರಾಮಯ್ಯನವರ ಅಣತಿಯಂತೆ ನಡೆಯುತ್ತಿತ್ತು. ಸಮನ್ವಯ ಸಮಿತಿ ಕೇವಲ ಹೆಸರಿಗೆ ಮಾತ್ರ ಆಗಿತ್ತು. ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಲು ಆಗಲಿಲ್ಲ. ಸಿದ್ದರಾಮಯ್ಯ ಕೈಗೊಂಬೆಯಂತೆ ಕಾರ್ಯನಿರ್ವಹಿಸುವ ಸ್ಥಿತಿ ಬಂದಿತ್ತು ಎಂದು ರಾಜೀನಾಮೆ ಪತ್ರದಲ್ಲಿ ವಿಶ್ವನಾಥ್ ಕಿಡಿಕಾರಿದ್ದಾರೆ.

ಸರ್ಕಾರ ನಡೆಸುವ ಪ್ರಾಮಾಣಿಕ ಪ್ರಯತ್ನ ನಡೆಯಲಿಲ್ಲ. ಎರಡೂ ಪಕ್ಷಗಳ ನಡುವೆ ಸಮನ್ವಯ ಸಾಧಿಸುವಲ್ಲಿ ವಿಫಲ. ಜೆಡಿಎಸ್ ಅಧ್ಯಕ್ಷನಾಗಿದ್ದರೂ ಸಮನ್ವಯ ಸಮಿತಿಯಲ್ಲಿ ನನಗೆ ಸ್ಥಾನ ಕೊಡಲಿಲ್ಲ. ದಿನೇಶ್ ಗುಂಡೂರಾವ್ ಅವರಿಗೂ ಅವಕಾಶ ಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.