ಜೆಡಿಎಸ್ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ : ಕುಮಾರಸ್ವಾಮಿ – Vishwanews24
ಜೆಡಿಎಸ್ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ : ಕುಮಾರಸ್ವಾಮಿ
ಕೋಲಾರ : ಜೆಡಿಎಸ್‌ಗೆ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ ನೀಡುವ ಮುಕ್ತ ಅವಕಾಶ ನಮ್ಮ ಪಕ್ಷದಲ್ಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಗ್ರಾಮ ವಾಸ್ತವ್ಯದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಕುಮಾರಸ್ವಾಮಿ ದೆಹಲಿಗೆ ಹೋದರೆ ತಾವೇ ಮುಖ್ಯಮಂತ್ರಿ ಆಗಬಹುದೆಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ರೀತಿ ಚರ್ಚೆ ಮಾಡಲು ಅವಕಾಶ ಇರುವುದು ನಮ್ಮ ಪಕ್ಷದಲ್ಲಿ ಮಾತ್ರ’ ಎಂದರು.
⏺️ ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟ ಸ್ಥಳಕ್ಕೆ ಗೃಹಮಂತ್ರಿ ಆರಗ, DGP ಪ್ರವೀಣ್ ಸೂದ್ ಭೇಟಿ – Vishwanews24
ಮುಸ್ಲಿಮರೂ ಕೂಡ ಕರ್ನಾಟಕದ ಪ್ರಜೆಗಳು. ಅಪ್ಪಟ ಕನ್ನಡಿಗರಾಗಿರುವ ಮುಸ್ಲಿಮರನ್ನು ನಮ್ಮ ಪಕ್ಷ ಸದಾ ಬೆಂಬಲಿಸುತ್ತಲೇ ಬಂದಿದೆ. ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಸಿಎಂ ಮಾಡಬಾರದು ಎಂಬ ನಿಯಮವೇನು ಇಲ್ಲವಲ್ಲ ಎಂದು ಮಾರ್ಮಿಕವಾಗಿ ನುಡಿದರು.
ದಲಿತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಪಟ್ಟ ನೀಡಲು ಸಿದ್ಧ. ದಲಿತರ ಮತ ಪಡೆಯಲು ಈ ಘೋಷಣೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
✈️ ಶಬರಿಮಲೆ ಭಕ್ತಾದಿಗಳಿಗೆ ವಿಮಾನದಲ್ಲಿ ಇರುಮುಡಿ ಜತೆ ತೆಂಗಿನಕಾಯಿ ಕೊಂಡೊಯ್ಯಲು ಅನುಮತಿ – Vishwanews24
