ಜೆಡಿಎಸ್​ ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್​ ಕುಮಾರಸ್ವಾಮಿ ಹಾಗೂ ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್​.ಕೆ. ಕುಮಾರಸ್ವಾಮಿ ಆಯ್ಕೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಎಚ್.ವಿಶ್ವನಾಥ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಕಲೇಶಪುರ ಶಾಸಕ ಎಚ್​.ಕೆ. ಕುಮಾರಸ್ವಾಮಿ ಅವರನ್ನು ನೇಮಿಸಲಾಗಿದೆ.

ಉಪಾಧ್ಯಕ್ಷರಾಗಿ ಶಾಸಕ ಗೋಪಾಲಯ್ಯ ಮತ್ತು ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಅವರನ್ನು ನೇಮಿಸಲಾಗಿದೆ. ಹಾಗೂ ಜೆಡಿಎಸ್​ ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್​ ಕುಮಾರಸ್ವಾಮಿ ಅವರನ್ನು ನೇಮಿಸಲಾಗಿದೆ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ಘೋಷಿಸಿದರು.

ಜೆಡಿಎಸ್​ ಯುವ ಘಟಕದ ಕಾರ್ಯಾಧ್ಯಕ್ಷರಾಗಿ ನೂರ್ ಅಹ್ಮದ್ ಮತ್ತು ಯುವ ಘಟಕದ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಶರಣಗೌಡ ಕಂದಕೂರು ಅವರು ನೇಮಕವಾಗಿದ್ದಾರೆ.

ಎಚ್​. ವಿಶ್ವನಾಥ್​ ಅವರು ನೂತನ ರಾಜ್ಯಾಧ್ಯಕ್ಷರಿಗೆ ಜೆಡಿಎಸ್​ ಬಾವುಟವನ್ನು ನೀಡಿ ಅಧಿಕಾರ ಹಸ್ತಾಂತರಿಸಿದರು.