ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಪ್ರಕರಣ : ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ನಾಪತ್ತೆ! Vishwanews24

Featured, ರಾಜ್ಯ ನ್ಯೂಸ್

ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಪ್ರಕರಣ : ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ನಾಪತ್ತೆ!Vishwanews24

ಬೆಂಗಳೂರು: ಜೊಮ್ಯಾಟೋ ಆಹಾರ ಡೆಲಿವರಿ ಸಂದರ್ಭ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಜೊಮ್ಯಾಟೋ ಡೆಲಿವರಿ ಬಾಯ್ ಕಾಮರಾಜ್ ಯುವತಿ ಹಿತೇಶಾ ಚಂದ್ರಾನಿ ಎಫ್ಐಆರ್ ದಾಖಲಿಸುತ್ತಿದ್ದಂತೆಯೇ ಆರೋಪ ಮಾಡಿದ್ದ ಮಹಿಳೆ ನಾಪತ್ತೆಯಾಗಿದ್ದಾಳೆ.

ಆಹಾರ ಡೆಲಿವರಿ ವಿಳಂಬವನ್ನು ಪ್ರಶ್ನಿಸಿದ್ದ ಯುವತಿ ಹಿತೇಶಾ ಚಂದ್ರಾನಿ ಮೇಲೆ ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮರಾಜ್ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಹಿನ್ನೆಲೆಯಲ್ಲಿ ಪೊಲೀಸರು ಮಹಿಳೆಯನ್ನು ಸಂಪರ್ಕರಿಸಲು ಯತ್ನಿಸಿದ್ದು, ಈ ವೇಳೆ ಮಹಿಳೆ ಬೆಂಗಳೂರಿನಿಂದ ಕಾಲ್ಕಿತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ಬ್ರೇಕ್ : ರಾಜ್ಯ ವಕ್ಫ್ ಮಂಡಳಿ ಸುತ್ತೋಲೆ -Vishwanews24

ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಆರೋಪ ಮಾಡಿದ್ದ ಮಹಿಳೆಯ ಹಿತೇಶ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲು ಸಂಪರ್ಕಿಸಲು ಯತ್ನಿಸಿದ್ದೆವು. ಆದರೆ, ಮಹಿಳೆ ನಗರದಿಂದ ಹೊರಹೋಗಿದ್ದು, ಮಹಾರಾಷ್ಟ್ರದಲ್ಲಿ ಸಂಬಂಧಿಕರೊಬ್ಬರ ಮನೆಯಲ್ಲಿ ಇದ್ದಾರೆಂದು ತಿಳಿದುಬಂದಿದೆ ಎಂದು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರು ಮಾಹಿತಿ ನೀಡಿದ್ದಾರೆ.

ನಗರಕ್ಕೆ ಬಂದ ಕೂಡಲೇ ಹೇಳಿಕೆ ನೀಡುವಂತೆ ಮಹಿಳೆಗೆ ಸೂಚನೆ ನೀಡಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರೆಯಲಿದೆ. ಮಹಿಳೆ ಹೇಳಿಕೆ ನೀಡಲು ಬರದೇ ಹೋದರೆ, ಆಕೆಯನ್ನು ಬಂಧನಕ್ಕೊಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಪಡುಬಿದ್ರಿ : ಬ್ಲೂ ಫ್ಲಾಗ್ ಬೀಚ್ ನಲ್ಲಿ ನಮಾಜ್ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿಂದು ಜಾಗಠಣ ವೇದಿಕೆ ಆಗ್ರಹ -Vishwanews24