ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಗೆ `ವಿಶ್ವ ಚೇತನ’ ಪ್ರಶಸ್ತಿ ಪ್ರದಾನ – Vishwanews24
ಚಿಕ್ಕೋಡಿ : ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆಗೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದ ಕಾಡಸಿದ್ದೇಶ್ವರ ಮಠದಿಂದ ಪ್ರದಾನ ಮಾಡುವ `ವಿಶ್ವ ಚೇತನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಯಡೂರು ಮಠದ ಪೀಠಾಧಿಪತಿಗಳು, ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಸ್ವಾಮೀಜಿ, ನಿಡಸೋಶಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹಾಗೂ ಕಾಶಿ ಜಗದ್ಗುರು ಸ್ವಾಮೀಜಿಗಳು ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರಿಗೆ ಈ ಪ್ರಶಸ್ತಿ ನೀಡಿ ಸನ್ಮಾನಿಸಿದ್ದಾರೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅನಿಲ್ ಕುಂಬ್ಳೆ, ಇಂದಿನ ಯುವಕರು ತಾವು ಮಾಡುವ ಕೆಲಸದಲ್ಲಿ ಶ್ರಮ ವಹಿಸಬೇಕು ಎಂದಾಗ ಮಾತ್ರ ಯಸಸ್ಸು ಸಾಧ್ಯ. ಇಂದಿನ ಮಕ್ಕಳು ಮೊಬೈಲ್ ನಲ್ಲಿ ಮುಳುಗಿ ನೈಜ ಕ್ರೀಡೆಗಳನ್ನು ಮರೆಯುತ್ತಿದ್ದಾರೆ. ಮಕ್ಕಳನ್ನು ಮೈದಾನಗಳಿಗೆ ಸೆಳೆಯಲು ಕ್ರೀಡೆಗಳಿಗೆ ಉತ್ತೇಜನ ನೀಡಬೇಕಿದೆ ಎಂದರು.

