ಟ್ಯಾಂಕರ್ ಪಲ್ಟಿಯಾಗಿ ಚಾಲಕ ಸಾವು : ಎಣ್ಣೆ ತುಂಬಿಸಿಕೊಳ್ಳಲು ಮುಗಿಬಿದ್ದ ಜನ..
ವಿಜಯಪುರ : ಚಾಲಕನ ನಿಯಂತ್ರಣ ತಪ್ಪಿ ಸೊಯಾಬಿನ್ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಚಾಲಕ ಅಲ್ಲಾಭಕ್ಷ (37) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದದ ರಭಸಕ್ಕೆ ಟ್ಯಾಂಕರ್ ನಿಂದ ಎಣ್ಣೆ ಸೋರಿಕೆಯಾಗಿದೆ.
ಇದನ್ನು ಗಮನಿಸಿದ ಚಡಚಣ ನಿವಾಸಿಗಳು ಸೋರಿಕೆಯಾಗುತ್ತಿರುವ ಸೊಯಾಬಿನ್ ಎಣ್ಣೆಯನ್ನು ತುಂಬಿಕೊಳ್ಳಲು ಬಾಟಲಿ, ಬಿಂದಿಗೆ, ಬಕೇಟ್ ನಲ್ಲಿ ತುಂಬಿಕೊಂಡು ಹೋಗುತ್ತಿದ್ದಾರೆ. ಇನ್ನು ಟ್ಯಾಂಕರ್ ನಲ್ಲಿ 18 ಲಕ್ಷ ರೂ. ಮೌಲ್ಯದ ಸೋಯಾಬಿನ್ ಎಣ್ಣೆ ಇತ್ತೆನ್ನಲಾಗಿದೆ.
ಘಟನೆ ಸಂಬಂಧ ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
