ಅಶ್ವತ್ಥನಾರಾಯಣರ ಪದವಿ ಮುಂದಿರುವ ‘ಉಪʼ ಹೋಗಿ ಆದಷ್ಟು ಬೇಗ ‘ಮುಖ್ಯಮಂತ್ರಿʼ ಎಂಬ ಪದನಾಮ ಬರುವಂತಾಗಲಿ : ಡಿ.ವಿ.ಸದಾನಂದಗೌಡ -Vishwanews24

Featured, ರಾಜ್ಯ ನ್ಯೂಸ್

ಡಾ.ಸಿ.ಎನ್‌.ಅಶ್ವತ್ಥನಾರಾಯಣರ ಪದವಿ ಮುಂದಿರುವ ‘ಉಪʼ ಹೋಗಿ ಆದಷ್ಟು ಬೇಗ ‘ಮುಖ್ಯಮಂತ್ರಿʼ ಎಂಬ ಪದನಾಮ ಬರುವಂತಾಗಲಿ : ಡಿ.ವಿ.ಸದಾನಂದಗೌಡ -Vishwanews24

ಬೆಂಗಳೂರು: ಅತ್ಯುತ್ತಮ ಕರ್ತವ್ಯ ಪ್ರಜ್ಞೆ ಹಾಗೂ ಸದ್ದಿಲ್ಲದೆ ತಮ್ಮ ಪಾಡಿಗೆ ತಾವು ನಿಷ್ಠೆಯಿಂದ ಕೆಲಸ ಮಾಡಿಕೊಂಡು ಹೋಗುತ್ತಿರುವ ಡಾ.ಸಿ.ಎನ್‌.ಅಶ್ವತ್ಥನಾರಾಯಣರ ಪದವಿ ಮುಂದಿರುವ ʼಉಪʼ ಹೋಗಿ ಆದಷ್ಟು ಬೇಗ ʼಮುಖ್ಯಮಂತ್ರಿʼ ಎಂಬ ಪದನಾಮ ಬರುವಂತಾಗಲಿ. ಅದಕ್ಕೆ ಬೇಕಾದ ಎಲ್ಲ ಕೃಪೆ-ಚೈತನ್ಯವನ್ನು ಆ ಪರಮಶಿವ ನೀಡಲಿ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಶುಭ ಹಾರೈಸಿದರು.

ಬೆಂಗಳೂರಿನ ಮಲ್ಲೇಶ್ವರದಲ್ಲಿ ಗುರುವಾರ ರಾತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಫೌಂಡೇಷನ್‌ ಆಯೋಜಿಸಿದ್ದ ಮಹಾ ಶಿವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಾಗಿರುವ ಹಿನ್ನೆಲೆ: ಮಾ.13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆ ಸಾಧ್ಯತೆ ; ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ -Vishwanews24

ಅಶ್ವತ್ಥನಾರಾಯಣ ಕೇವಲ ಮಾತನಾಡುತ್ತಲೇ ಕೆಲಸ ಮಾಡುವ ವ್ಯಕ್ತಿಯಲ್ಲ. ಅಬ್ಬರ ಇಲ್ಲ, ಆಡಂಬರ ಇಲ್ಲದ ವ್ಯಕ್ತಿ. ಅವರು ಮಾಡುತ್ತಿರುವ ಉತ್ತಮ ಕೆಲಸಗಳೇ ಅವರ ಬಗ್ಗೆ ಮಾತನಾಡುತ್ತಿವೆ. ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಬಿಡುವಿಲ್ಲದ ಕೆಲಸಗಳಲ್ಲಿ ತೊಡಗಿಬಿಡುತ್ತಾರೆಂದು ಸದಾನಂದಗೌಡರು ಮಾರ್ಮಿಕವಾಗಿ ನುಡಿದರು.

ನಮ್ಮ ನಡುವಿನ ರಾಜಕಾರಣಿಗಳಲ್ಲಿ ಮಾತನಾಡುವವರೇ ಜಾಸ್ತಿ. ಇದಕ್ಕೆ ಅಶ್ವತ್ಥನಾರಾಯಣ ಅಪವಾದ. ಅವರದ್ದು ಮಾತು ಕನಿಷ್ಠ, ಕೆಲಸ ಗರಿಷ್ಠ ಎನ್ನುವ ನೀತಿ. ಈ ಪರಿಶ್ರಮವೇ ಅವರನ್ನು ಮುಂದೊಂದು ದಿನ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲಿದೆ ಎಂದು ಗೌಡರು ಹೇಳಿದರು.

ಕೊರೋನಾ 2ನೇ ಅಲೆ ಭೀತಿ : ಬೆಂಗಳೂರಿನಲ್ಲಿ ಮಾರ್ಚ್ 31ರವರೆಗೆ ನೈಟ್ ಪಾರ್ಟಿ ಬ್ಯಾನ್ -Vishwanews24

ಮಲ್ಲೇಶ್ವರ ಕ್ಷೇತ್ರದಲ್ಲಿ ಅದೆಷ್ಟೋ ಮಹಾನುಭಾವರು ಇದ್ದಾರೆ. ಕವಿಗಳು, ವಿಜ್ಞಾನಿಗಳು, ಪಂಡಿತರು, ಪದ್ಮಗಳು- ಭಾರತ ರತ್ನಗಳು ಇದ್ದಾರೆ. ಮುಂದಿನ ದಿನಗಳಲ್ಲಿ ಇದೇ ಕ್ಷೇತ್ರದಿಂದ ಒಬ್ಬ ಮುಖ್ಯಮಂತ್ರಿಯೂ ಹೊರಹೊಮ್ಮಲಿ ಎಂದು ಸದಾನಂದ ಗೌಡರು ಹೇಳಿದರು.

ಮಲ್ಲೇಶ್ವರದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ನೃತ್ಯ, ಹಾಸ್ಯ, ಸಂಗೀತ ಮೇಳೈಸಿದ ಸಾಂಸ್ಕೃತಿಕ ಜಾಗರಣೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಅತಿಥಿಗಳನ್ನು ಸ್ವಾಗತಿಸಿದರು.

ಮಂಗಳೂರು: ಗಿಳಿಗಳ ಮೂಲಕ ಶಾಸ್ತ್ರ ಹೇಳುತ್ತಿದ್ದ ಐವರನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು -Vishwanews24