ಡಿಕೆ ಶಿ ಅವರನ್ನು ಭೇಟಿಯಾಗಿ ಆತ್ಮಸ್ಥೈರ್ಯ ತುಂಬಿದ್ದೇನೆ , ಅವರು ಎಲ್ಲವನ್ನು ಎದುರಿಸಿ ಹೊರ ಬರಲಿದ್ದಾರೆ : ಹೆಚ್ ಡಿ ಕುಮಾರಸ್ವಾಮಿ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನದ ಬಳಿ, ನ್ಯಾಯಾಂಗ ಬಂಧನದಿಂದಾಗಿ ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇಂದು ಭೇಟಿಯಾದರು.

ಇಂದು ದೆಹಲಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಅಲ್ಲಿಂದ ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನದಲ್ಲಿರುವ ತಿಹಾರ್ ಜೈಲಿಗೆ ತೆರಳಿದರು. ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಹೊರ ಬಂದ ಬಳಿಕ ಮಾತನಾಡಿದ ಅವರು, ಇದು ನನ್ನ ಖಾಸಗಿ ಭೇಟಿಯಾಗಿದೆ ಎಂದು ತಿಳಿಸಿದರು.

ರಾಜಕೀಯವೇ ಬೇರೆ, ವೈಯಕ್ತಿಕ ವಿಚಾರಗಳೇ ಬೇರೆ. ನಾನು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಆತ್ಮಸ್ಥೈರ್ಯ ತುಂಬಿದ್ದೇನೆ. ಅವರು ಮಾನಸಿಕವಾಗಿ ಬಲಿಷ್ಠರಿದ್ದಾರೆ. ಎಲ್ಲವನ್ನು ಎದುರಿಸಿ ಹೊರ ಬರಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತ ಪಡಿಸಿದರು.