ಡಿಕೆ ಶಿ ಜತೆಗಿನ ದಿವ್ಯಾ ಹಾಗರಗಿ ಫೋಟೋ ವೈರಲ್ ; ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ – Vishwanews24
ಡಿಕೆ ಶಿವಕುಮಾರ್ ಜತೆಗಿನ ದಿವ್ಯಾ ಹಾಗರಗಿ ಫೋಟೋ ವೈರಲ್ ; ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ – Vishwanews24
ಬೆಂಗಳೂರು: ಪಿಎಸ್ ಐ ನೇಮಕ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ಇರುವ ಫೋಟೋ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.
ಸರಣಿ ಟ್ವೀಟ್ ಮೂಲಕ ಶಾಸಕ ಪ್ರಿಯಾಂಕ ಖರ್ಗೆ ಹಾಗೂ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆರೋಪ ನಡೆಸಿದೆ.
ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ. ಆದರೆ ಇಲ್ಲಿ ನೋಡಿ! ಈ ಚಿತ್ರ ಏನು ಹೇಳುತ್ತದೆ? ಎಷ್ಟೊಂದು ತನ್ಮಯತೆಯಿಂದ ಮಾತನಾಡುತ್ತಿದ್ದಾರೆ! ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ ಎಂದು ಪ್ರಶ್ನಿಸಿದೆ.
ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ.
ಆದರೆ ಇಲ್ಲಿ ನೋಡಿ..!!! ಈ ಚಿತ್ರ ಏನು ಹೇಳುತ್ತದೆ?
ಎಷ್ಟೊಂದು ತನ್ಮಯತೆಯಿಂದ ಮಾತನಾಡುತ್ತಿದ್ದಾರೆ!
ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ?#CONgressPSIToolkit pic.twitter.com/qnEPtdjRa6
— BJP Karnataka (@BJP4Karnataka) April 26, 2022
ಪಿಎಸ್‌ಐ ನೇಮಕ ಹಗರಣ ಕಾಂಗ್ರೆಸ್ ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್ ಎಂದು ಸಾರಿ ಸಾರಿ ಹೇಳುವುದಕ್ಕೆ ಸಾಕ್ಷ್ಯ ಇಲ್ಲಿದೆ. ಅಧಿಕಾರದಲ್ಲಿ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ!
ಚಿಕ್ಕಮಗಳೂರು: ಆನೆದಂತದಿಂದ ಚೆಸ್ ಆಟದ ಪಾನ್ ತಯಾರಿಸಿ ಮಾರಾಟಕ್ಕೆ ಯತ್ನ: ಆರೋಪಿ ಬಂಧನ
ಸಿಡಿ ವಿವಾದ, ಹಿಜಾಬ್ ಸಂಘರ್ಷ, 40% ಪರ್ಸೆಂಟ್ ಕಮಿಷನ್, ಹರ್ಷ ಕೊಲೆ, ಹುಬ್ಬಳ್ಳಿ ಗಲಭೆ, ಪಿಎಸ್‌ಐ ನೇಮಕ ಹಗರಣ. ಎಲ್ಲದಕ್ಕೂ ಸೂತ್ರಧಾರ ಒಬ್ಬರೇ. ಮಾನ್ಯ ಡಿಕೆ ಶಿವಕುಮಾರ್ ಅವರೇ.ನೀವೆಷ್ಟೇ ರಹಸ್ಯ ಕಾರ್ಯಚರಣೆ ನಡೆಸಿದರೂ ಸತ್ಯ ಒಂದಿಲ್ಲೊಂದು ದಿನ ಬಯಲಾಗಲೇಬೇಕಲ್ಲವೇ? ಎಂದು ಟೀಕಿಸಿದೆ.
ಪ್ರಿಯಾಂಕ ಖರ್ಗೆ ಅವರ ಜೊತೆ ನಾವಿದ್ದೇವೆ ಎಂದು ಕೆಪಿಸಿಸಿ ಭ್ರಷ್ಟಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇಕೆ ಎಂದು ಈಗ ಬಯಲಾಗುತ್ತಿದೆ. ಹಗರಣದ ನಿರ್ಮಾಣ, ನಿರ್ದೇಶನ, ಚಿತ್ರಕತೆ, ಸಂಭಾಷಣೆ ಎಲ್ಲವೂ ಸಿದ್ಧವಾಗಿದ್ದು ಕೆಪಿಸಿಸಿ ಕಚೇರಿಯಲ್ಲೇ ಎಂದು ಬಿಜೆಪಿ ಆರೋಪಿಸಿದೆ.
