ಡಿಕೆ ಶಿ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ – ಗ್ಲಾಸ್​ ಪುಡಿಪುಡಿ, ತಪ್ಪಿದ ಅನಾಹುತ – Vishwanews24

Featured, ರಾಜ್ಯ ನ್ಯೂಸ್

ಡಿಕೆ ಶಿವಕುಮಾರ್‌ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ – ಗ್ಲಾಸ್​ ಪುಡಿಪುಡಿ, ತಪ್ಪಿದ ಅನಾಹುತ

ಬೆಂಗಳೂರು : ವಿಧಾನ ಸಭೆ ಚುನಾವಣಾ ಪ್ರಚಾರಕ್ಕಾಗಿ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೆಲಿಕಾಪ್ಟರ್‌ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ.

ಬೆಂಗಳೂರಿನ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಹತ್ತಿದ್ದಾರೆ. ಕೊಂಚ ದೂರ ಸಾಗುತ್ತಿದ್ದಂತೆ ಹೆಲಿಕಾಪ್ಟರ್​ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದ್ದು ತಕ್ಷಣ ಎಚ್ಚೆತ್ತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಕೆಲ ಕಾಲ ಡಿಕೆಶಿ ಭಯಭೀತರಾಗಿದ್ದು.ಯಾವುದೇ ಹಾನಿಯಾಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುರಕ್ಷಿತರಾಗಿದ್ದಾರೆ ಎಂದು ಹೆಲಿಕಾಪ್ಟರ್ ಸಿಬ್ಬಂದಿ ತಿಳಿಸಿದ್ದಾರೆ . ಘಟನೆ ಬಳಿಕ ಡಿ.ಕೆ.ಶಿವಕುಮಾರ್​ ಹೆಚ್​ಎಎಲ್​ ಏರ್​ಪೋರ್ಟ್​​ಗೆ ಮತ್ತೆ ಬಂದಿಳಿದಿದ್ದಾರೆ.

ಎನ್‌ಸಿಪಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ʻಶರದ್ ಪವಾರ್ʼ – Vishwanews24

 

Leave a Reply