ಡಿಕೆ ಶಿವಕುಮಾರ್ ಅವರ ಯಾವುದೇ ಆಸ್ತಿ ನನ್ನ ಹೆಸರಿನಲ್ಲಿ ಇಲ್ಲ : ಲಕ್ಷ್ಮೀ ಹೆಬ್ಬಾಳ್ಕರ್ -Vishwanews24
ಬೆಂಗಳೂರು : ಡಿಕೆ ಶಿವಕುಮಾರ್ ಅವರು ನನ್ನನ್ನು ರಾಜಕೀಯವಾಗಿ ಬೆಳೆಸಿದವರು. ಅದನ್ನು ಬಿಟ್ಟು ಡಿಕೆ ಶಿವಕುಮಾರ್ ಅವರ ಯಾವುದೇ ಆಸ್ತಿ ನನ್ನ ಹೆಸರಿನಲ್ಲಿ ಇಲ್ಲ. ಇಡಿ ಸಮನ್ಸ್ ಬಂದಿದೆ. ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಇಡಿ ಅಧಿಕಾರಿಗಳಿಗೆ ಸೆ.14ರಂದೇ ನನಗೆ ಸಮನ್ಸ್ ಬಂದಿತ್ತು. ಆದರೇ ವಿಚಾರಣೆಗೆ ಹಾಜರಾಗಿರಲಿಲ್ಲ. ಯಾವ ವಿಚಾರಕ್ಕೆ ಕೊಟ್ಟಿದ್ದಾರೋ ಎಂದು ನನಗೆ ಗೊತ್ತಿಲ್ಲ. ಆದರೇ ಇದೀಗ ಮತ್ತೆ ನೀಡಲಾಗಿದೆ. ಸೆಪ್ಟಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಿದ್ದಾರೆ ಎಂದು ಹೇಳಿದರು.
ಸೆಪ್ಟಂಬರ್ 19ರಂದು ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ. ಅದಕ್ಕೂ ಮೊದಲು ಇಡಿ ಅಧಿಕಾರಿಗಳಲ್ಲಿ ನಮ್ಮ ಮನೆಯಲ್ಲಿಯೇ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದೇನೆ. ಅದು ಬೆಳಗಾವಿಯಾದೂರ ಸರಿ, ಬೆಂಗಳೂರಿನ ಮನೆಯಲ್ಲಿ ಆದರೂ ಸರಿ. ನಾನು ವಿಚಾರಣೆಗೆ ಹಾಜರಾಗಲು ಸಿದ್ದನಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಪ್ಟ ಪಡಿಸಿದರು.
