ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

Featured, ರಾಜ್ಯ ನ್ಯೂಸ್

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರು: ಡಿಕೆ ಶಿವಕುಮಾರ್‌ ಅವರು ಮನಸ್ಸು ಮಾಡಿದ್ರೆ, ಸ್ವಂತ ಹಣದಲ್ಲೇ ಸಾಲ ಮನ್ನಾ ಮಾಡಬಹುದು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾಗೆ ಆಗ್ರಹಿಸಿದರು.

ಇದನ್ನೂ ಓದಿ: 

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ಡಿಕೆ ಶಿವಕುಮಾರ್ ಅವರು ಮನಸು ಮಾಡಿದ್ರೆ, ತಮ್ಮ ಸ್ವಂತ ಹಣದಲ್ಲೇ ಸಾಲ ಮನ್ನಾ ಮಾಡಬಹುದು. ರೈತರು ಸಾಲಮನ್ನಾ ಆಗಬೇಕು ಅಂತ ಹೇಳ್ತಿದ್ದಾರೆ. ಸಿಎಂ ಕೂಡಾ ʻʻಸಿದ್ದರಾಮಯ್ಯ, ಕುಮಾರಸ್ವಾಮಿ ಕಾಲದಲ್ಲಿ ಸಾಲ ಮನ್ನಾ ಆಗಿದೆ. ನಾನು ಸಾಲಮನ್ನಾ ಮಾಡಿಲ್ಲ ಅಂದ್ರೆ 2028 ಚುನಾವಣೆಗೆ ಕಷ್ಟ ಆಗುತ್ತೆ ಅಂತ ಹೀಗಾಗಿ ದುಡ್ಡು ಹೊಂದಿಸಿʼʼ ಅಂತ ಹೇಳ್ತಾರೆ. ಡಿಕೆ ಶಿವಕುಮಾರ್ ಮನಸು ಮಾಡಿದ್ರೆ ಸಾಲ ಮನ್ನಾ ಮಾಡೋಕೆ ಆರ್ಥಿಕ ಇಲಾಖೆ ಬೇಕಿಲ್ಲ ಎಂದು ಕುಟುಕಿದರು.

ಬೆಂಗಳೂರು ಸುತ್ತಮುತ್ತ ಸಾವಿರಾರು ಕೋಟಿ ಆಸ್ತಿ ನುಂಗಲು ಹೊರಟಿದ್ದಾರೆ. ʻನೈಸ್ʼ ಹೆಸರಿನಲ್ಲಿ ಸಾವಿರಾರು ಕೋಟಿ ನುಂಗೋಕೆ ಹೊರಟಿದ್ದಾರೆ. ಮನಸ್ಸು ಮಾಡಿದ್ರೆ ಡಿಕೆಶಿ ತಮ್ಮ ಕೈಯಿಂದಲೇ ಸಾಲ ಮನ್ನಾ ಮಾಡಬಹುದು. ವೈಯಕ್ತಿಕವಾಗಿಯೇ ಸಾಲ ಮನ್ನಾ ಮಾಡಬಹುದು. ಇತ್ತೀಚೆಗೆ ಬಹಳ ಬದಲಾವಣೆ ಆಗಿರೋ ರೀತಿ ತೋರಿಸ್ತಾ ಇದ್ದಾರೆ. ಅದು ಕಾರ್ಯ ರೂಪಕ್ಕೆ ಇಲ್ಲಿವರೆಗೂ ಹಲವಾರು ರೀತಿ ಸಂಪಾದನೆ ಮಾಡಿರೋ ಹಣವನ್ನ ಜನರ ಪರವಾಗಿ ಕೊಟ್ಟರೆ 2028ಕ್ಕೂ, ಮುಂದೆಯೂ ನಾನೇ ಸಿಎಂ ಅಂತ ಹೇಳ್ತಾ ಇದ್ದಾರೆ. ಇದು ಮಾಡಿದ್ರೆ ಅದೂ ಆಗಬಹುದು ಎಂದು ಭವಿಷ್ಯ ನುಡಿದರು.

ಇದನ್ನೂ ಓದಿ: 

ಮಂಗಳೂರು:  ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ ಕೆ ಶಿವಕುಮಾರ್ ಭೇಟಿ – vishwanews24

ಇನ್ನು ಸಾಲಮನ್ನಾಗೆ ಮೋದಿ ಸಹಕಾರ ಬೇಕು ಎಂದ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಎರಡು ಬಾರಿ ಸಾಲಮನ್ನಾ ಮಾಡಿದಾಗ ಮೋದಿ, ಮನಮೋಹನ್ ಸಿಂಗ್ ಅವರ ಬಳಿ ಹಣ ಕೊಡಿ ಅಂತ ಕೇಳಿದ್ನಾ? ನಮ್ಮ ತೆರಿಗೆ ಹಣದಿಂದ ಸಾಲಮನ್ನಾ ಮಾಡಿದ್ದೇನೆ. ಪೊಳ್ಳು ಘೋಷಣೆಗಳನ್ನ ಸಿಎಂ ಮೊದಲು ಬಿಡಲಿ. ಎಷ್ಟು ಕೆಲಸ ಆಗುತ್ತೋ ಅಷ್ಟು ಸಾಲ ಮಾಡಿ ಎಂದು ಒತ್ತಾಯಿಸಿದರು.

Leave a Reply