ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು – vishwanews24
ಡಿವೈಡರ್‌ಗೆ ಬೈಕ್ ಡಿಕ್ಕಿ : ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು
ಬೆಂಗಳೂರು: ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಗೇರಿಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ನಡೆದಿದೆ.
ಅತುಲ್, ಗೌರಿಶಂಕರ್ ಮೃತ ನರ್ಸಿಂಗ್ ವಿದ್ಯಾರ್ಥಿಗಳು. ನಸುಕಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
ಇದನ್ನೂ ಓದಿ:
ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
