ಡಿಸೆಂಬರ್ 25 ರಂದು ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸಮ್ಮಾನ್ ದಿನಾಚರಣೆ ಕಾರ್ಯಕ್ರಮ: ಕುಯಿಲಾಡಿ ಸುರೇಶ್ ನಾಯಕ್

Featured, ಉಡುಪಿ

ಉಡುಪಿ: 25-12-2020ರಂದು ಭಾರತ ರತ್ನ ಮಾಜಿ ಪ್ರಧಾನ ಮಂತ್ರಿಗಳಾದ ದಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ರಾಜ್ಯಾದ್ಯಂತ “ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸನ್ಮಾನ್ ದಿನಾಚರಣೆ’ಯನ್ನು ಹಮ್ಮಿಕೊಳ್ಳಲಾಗಿದ್ದು ಈ ಸಂದರ್ಭದಲ್ಲಿ ಅಸಂಖ್ಯ ನಾಯಕರು, ರೈತರ ಮತ್ತು ಬಡವರ ಕಲ್ಯಾಣಕ್ಕಾಗಿ ತಮ್ಮನ್ನು ಮುಡುಪಾಗಿಸಿಕೊಂಡಿರುವ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ದೇಶದ 9ಕೋಟಿ ರೈತ ಬಂಧು-ಭಗಿನಿಯರಿಗೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆ’ ಆಡಿಯಲ್ಲಿ 16,000 ಸಾವಿರ ಕೋಟಿ ರೂ.ಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ಮಧ್ಯಾಹ್ನ 12-00 ಗಂಟೆಗೆ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಟಲ್ ಬಿಹಾರಿ ವಾಜಪೇಯಿಯವರ ಹುಟ್ಟು ಹಬ್ಬದ ಪ್ರಯುಕ್ತ ಕಡಿಯಾಳಿಯ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ವತಿಯಿಂದ ರಕ್ತದಾನ ಶಿಬಿರ ಕೂಡ ಹಮ್ಮಿಕೊಳ್ಳಲಾಗಿದೆ ಮತ್ತು ನೀಲಾವರ ಗೋಶಾಲೆಯಲ್ಲಿ ಗೋಸೇವೆ,ಶಂಕರಪುರದ ಅನಾಥ ಆಶ್ರಮದಲ್ಲಿ ಹಣ್ಣುಹಂಪಲು ವಿತರಣೆ,ಸೇರಿದಂತೆ ಬಿಜೆಪಿಯ ವಿವಿಧ ಮೋರ್ಚದ ಕಾರ್ಯ ಕರ್ತರು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ,ಯುವಮೋರ್ಚ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ ಕಾರ್ಕಳ,ಸಹವಕ್ತಾರ ಶಿವಪ್ರಸಾದ್ ಶೆಟ್ಟಿ,ಮಾಧ್ಯಮ ಪ್ರಕೋಷ್ಠ ಸಂಚಾಲಕ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು