ಡಿಸೆಂಬರ್ ನಿಂದ ಫೆಬ್ರವರಿವರೆಗೆ ಕರ್ನಾಟಕ ಸೇರಿದಂತೆ ಈ 6 ರಾಜ್ಯಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24

Featured, ರಾಷ್ಟ್ರ ನ್ಯೂಸ್

ಡಿಸೆಂಬರ್ ನಿಂದ ಫೆಬ್ರವರಿವರೆಗೆ ಕರ್ನಾಟಕ ಸೇರಿದಂತೆ ಈ 6 ರಾಜ್ಯಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24

ನವದೆಹಲಿ : ಕರ್ನಾಟಕ ಆಂಧ್ರಪ್ರದೇಶ ರಾಯಲಸೀಮಾ ತಮಿಳುನಾಡು , ಪುದುಚೇರಿ  ಮತ್ತು ಕೇರಳಕ್ಕೆ  ಡಿಸೆಂಬರ್ ನಿಂದ ಫೆಬ್ರವರಿವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ  (ಐಎಂಡಿ) ಮುನ್ಸೂಚನೆ ನೀಡಿದೆ.

ಆಂಧ್ರಪ್ರದೇಶ, ರಾಯಲಸೀಮಾ, ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡು, ಆಂತರಿಕ ಪುದುಚೇರಿ ಮತ್ತು ಕೇರಳಕ್ಕೆ ಡಿಸೆಂಬರ್ ನಿಂದ ಫೆಬ್ರವರಿವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ವಾಯುವ್ಯ ಭಾರತಕ್ಕೆ ಸಾಮಾನ್ಯ ಮಳೆ ಸಂಭವನೀಯತೆ ಗಿಂತ ಕಡಿಮೆ ಇರಲಿದ್ದು, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಸಾಮಾನ್ಯ ಸರಾಸರಿ ತಾಪಮಾನ ಇರಲಿದೆ. ಪೂರ್ವ ಮತ್ತು ಪಶ್ಚಿಮ ಉತ್ತರ ಪ್ರದೇಶ, ಮಧ್ಯಪ್ರದೇಶ, ಪೂರ್ವ ರಾಜಸ್ಥಾನ ಮತ್ತು ಗುಜರಾತ್ ನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರ ಮನವೊಲಿಸಲಾಗುತ್ತದೆಯೇ ಹೊರತು ಕಠಿಣ ಕ್ರಮ ಕೈಗೊಳ್ಳುವುದಿಲ್ಲ : ಡಾ.ಕೆ.ಸುಧಾಕರ್‌ – Vishwanews24