ತಮಿಳುನಾಡು ಸರ್ಕಾರ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ : ಸಿಎಂ BSY -Vishwanews24
ತಮಿಳುನಾಡು ಸರ್ಕಾರ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ : ಸಿಎಂ BSY -Vishwanews24
ಬೆಂಗಳೂರು,: “ಕಾವೇರಿ ನದಿಯ ನೀರನ್ನು ಹೆಚ್ಚುವರಿಯಾಗಿ ಬಳಸಿಕೊಳ್ಳಲು ತಮಿಳುನಾಡಿಗೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯದ ಹಿತಾಸಕ್ತಿಯನ್ನು ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ಪ್ರಧಾನಿ ಮೋದಿ ಸಂತಾಪ -Vishwanews24
“ತಮಿಳುನಾಡು ಸರ್ಕಾರ, ವೈಗೈ, ಗುಂಡರ್ ಹಾಗೂ ಕಾವೇರಿ ನದಿಗಳನ್ನು ಜೋಡಿಸುವ 14,400 ಕೋಟಿ. ರೂ.ವೆಚ್ಚದ ಮಹತ್ವಾಕಾಂಕ್ಷೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರವಿವಾರ ಭೂಮಿಪೂಜೆ ನೆರವೇರಿಸಿದ್ದು, ಇದಾದ ಬಳಿಕ ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ಭುಗಿಲೆದ್ದಿದೆ. ತಮಿಳುನಾಡು ಕೈಗೆತ್ತಿಕೊಂಡಿರುವ ಯೋಜನೆಯ ವಿರುದ್ದ ಕೇಂದ್ರ ಮುಂದೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ” ಎಂದು ತಿಳಿಸಿದ್ದಾರೆ.
“ತಮಿಳುನಾಡು ಸರ್ಕಾರ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ. ಕಾನೂನಿನ ಪ್ರಕಾರ ಉಭಯ ರಾಜ್ಯಗಳು ನ್ಯಾಯಾಲಯದ ತೀರ್ಪಿನಂತೆ ನಡೆದುಕೊಳ್ಳಬೇಕು ಎಂದು ತಮಿಳುನಾಡಿಗೆ” ಬಿಎಸ್‌ವೈ ಸಲಹೆ ನೀಡಿದ್ದಾರೆ.
“ದೆಹಲಿಯಲ್ಲಿ ಅಂತರ್‌ರಾಜ್ಯ ಜಲ ವಿವಾದದ ಬಗ್ಗೆ ರಾಜ್ಯದ ಕಾನೂನು ತಂಡದೊಂದಿಗೆ ನಡೆದ ಸಭೆ ಮುಗಿದ ಬಳಿಕ ತಮಿಳುನಾಡು ಕೈಗೆತ್ತಿಕೊಂಡಿರುವ ಯೋಜನೆಯ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರಕ್ಕೆ ತಿಳಿಸಲಿದ್ದಾರೆ” ಎಂದು ಹೇಳಿದ್ದಾರೆ.
