ತೀರ್ಥಹಳ್ಳಿಯ ಕೂಳೂರಿನಲ್ಲಿ ಹಲ್ಲೆಗೊಳಗಾದ ಗೋರಕ್ಷಕರನ್ನು ಮಣಿಪಾಲ ಕೆ ಎಂ ಸಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ : vishwanews24
ತೀರ್ಥಹಳ್ಳಿಯ ಕೂಳೂರಿನಲ್ಲಿ ಹಲ್ಲೆಗೊಳಗಾದ ಗೋರಕ್ಷಕರನ್ನು ಮಣಿಪಾಲ ಕೆ ಎಂ ಸಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ : vishwanews24
ಬಿಗ್ ಪಾಯಿಂಟ್ ನ್ಯೂಸ್
ಮಣಿಪಾಲ ಕೆಎಂಸಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ
- ತೀರ್ಥಹಳ್ಳಿಯ ಕೂಳೂರಿನಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿದ ಪ್ರಕರಣ
- ಇಬ್ಬರು ಗಾಯಾಳುಗಳಿಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ
- ಮಣಿಪಾಲ ಕೆಎಂಸಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ
- ದಾಳಿಗೊಳಗಾದವರ ಆರೋಗ್ಯ ವಿಚಾರಿಸಿದ ಗೃಹ ಸಚಿವರು
- ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದ್ದ ಘಟನೆ
- ಗಂಭೀರ ಗಾಯಗೊಂಡಿದ್ದ ಇಬ್ಬರ ಆರೋಗ್ಯ ವಿಚಾರಿಸಿದ ಅರಗ ಜ್ಞಾನೆಂದ್ರ
- ಕೆಎಂಸಿ ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ
- ಸೂಕ್ತ ಚಿಕಿತ್ಸೆ ನೀಡುವಂತೆ ಸಚಿವ ಆರಗ ಜ್ಞಾನೇಂದ್ರ ಸೂಚನೆ
- ಉಡುಪಿಯ ಮಣಿಪಾಲದಲ್ಲಿರುವ ಕಸ್ತೂರ್ಬಾ ಮೆಡಿಕಲ್ ಆಸ್ಪತ್ರೆ
- ಗೋಸಾಗಾಟ ತಡೆಯುವ ವೇಳೆ ಇಬ್ಬರ ಮೇಲೆ ಟೆಂಪು ಹತ್ತಿಸಿದ್ದ ದುಷ್ಕರ್ಮಿಗಳು
ಬೇಜ್ಜವಳ್ಳಿ ಬಳಿ ಅಕ್ರಮವಾಗಿ ಜಾನುವಾರು ಸಾಗಣೆ ತಡೆಯಲು ಯತ್ನಿಸಿದ ಸಹೋದರರ ಮೇಲೆ ಜಾನುವಾರು ಕಳ್ಳರು ವಾಹನ ಹತ್ತಿಸಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಗಾಯಾಳುಗಳನ್ನು ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರ ಆರೋಗ್ಯ ವಿಚಾರಿಸಿದ ಗೃಹಸಚಿವರು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಕೆಎಂಸಿ ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಿದರು.
ಗಾಯಾಳುಗಳಾಧ ಶಿವಮೊಗ್ಗ ಪಟ್ಟಣ ಸಮೀಪದ ಕಿತ್ತನಗದ್ದೆ ಗ್ರಾಮದ ಚರಣ್ (24), ಕಿರಣ್ (23) ಅವರು ಮೇಳಿಗೆಯಿಂದ ಗೋವುಗಳ ಸಾಗಣೆ ವಿಷಯ ತಿಳಿದು ಬುಲೆಟ್ ಬೈಕ್ನಲ್ಲಿ ಬೆನ್ನಟ್ಟಿದ್ದಾರೆ. ವಿಷಯ ತಿಳಿದ ಜಾನುವಾರು ಕಳ್ಳರು ಬೆಜ್ಜವಳ್ಳಿಯ ಸಮೀಪ ಬೈಕ್ ಸವಾರರ ಮೇಲೆ ವಾಹನ ಚಲಾಯಿಸಿ ಪರಾರಿಯಾಗಿದ್ದಾರೆ.
ತಕ್ಷಣ ಎಚ್ಚೆತ್ತುಕೊಂಡ ಸಾರ್ವಜನಿಕರು ಘಟನಾ ಸ್ಥಳದಿಂದ ಪರಾರಿಯಾಗುತ್ತಿದ್ದ ಶಿವಮೊಗ್ಗ ನಗರದ ನವೀದ್ (27) ನನ್ನು ಹಿಡಿದು ಮಾಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಗೋವುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಮಾಳೂರು ಠಾಣೆ ವಶದಲ್ಲಿದ್ದು, ಪ್ರಕರಣ ದಾಖಲಾಗಿದೆ.
