ತುಮಕೂರಿನ ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್ – Vishwanews24

Featured, ರಾಜ್ಯ ನ್ಯೂಸ್

ತುಮಕೂರಿನ ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್

ತುಮಕೂರು: ಭಾರತ ತಂಡದ ಖ್ಯಾತ ಕ್ರಿಕೆಟಿಗ ಕನ್ನಡಿಗ ಕೆ.ಎಲ್.ರಾಹುಲ್,ತಂದೆ ಲೋಕೇಶ್, ತಾಯಿ ಲೋಕೇಶ್ವರಿ ಅವರೊಂದಿಗೆ ತುಮಕೂರಿನ ಕ್ಯಾತಸಂದ್ರ ಬಳಿಯ ಪ್ರಸಿದ್ದ ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.

ಮೊದಲಿಗೆ ನಡೆದಾಡುವ ದೇವರು ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಿದ್ದಗಂಗಾ ಮಠಾಧಿಪತಿ ಸಿದ್ದಲಿಂಗ ಮಹಾಸ್ವಾಮೀಜಿಗಳ ಆಶಿರ್ವಾದ ಪಡೆದರು.

ಸಿದ್ಧಲಿಂಗ ಶ್ರೀಗಳು ಕ್ರಿಕೆಟ್ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು, ರಾಹುಲ್ ಪ್ರತಿಭೆಯನ್ನು ಪ್ರಶಂಸಿಸಿ ಇನ್ನು ಎತ್ತರಕ್ಕೆ ಬೆಳೆಯುವಂತೆ ಆಶಿರ್ವಾದ ಮಾಡಿದರು.

ಆಮ್‌ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ – Vishwanews24

 

ಸಿದ್ದಗಂಗಾ ಮಠಕ್ಕೆ ಆಗಮಿಸಿದ ಕ್ರಿಕೆಟ್ ಆಟಗಾರ ಕೆ.ಎಲ್‌.ರಾಹುಲ್‌ ನೋಡಲು, ರಾಹುಲ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳುಮುಗಿಬಿದ್ದಿದ್ದರು.

 

Leave a Reply