ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು; ಸಿಎಂ ಜೊತೆ ಚರ್ಚಿಸಿ ಶೀಘ್ರ ಆದೇಶ : ಜಿ.ಪರಮೇಶ್ವರ್‌ – vishwanews24

Featured, ರಾಜ್ಯ ನ್ಯೂಸ್

ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು; ಸಿಎಂ ಜೊತೆ ಚರ್ಚಿಸಿ ಶೀಘ್ರ ಆದೇಶ : ಜಿ.ಪರಮೇಶ್ವರ್‌

ತುಮಕೂರು : ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿತ್ತು. ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆಗೆ ಮಾತನಾಡಿ, ಅವರ ಒಪ್ಪಿಗೆ ಪಡೆದು ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು‌.

ಸಿದ್ಧಗಂಗ ಮಠಕ್ಕೆ ಬುಧವಾರ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ತುಮಕೂರು ರೈಲ್ವೇ ನಿಲ್ದಾಣ ಸ್ವಾಮೀಜಿ ಅವರ ಹೆಸರಿನಲ್ಲಿ ಶಾಶ್ವತವಾಗಿ ಇರುತ್ತದೆ. ಅದು‌ ನಾವು ಅವರಿಗೆ ಕೊಡುವ ಗೌರವ. ಈ ಬಗ್ಗೆ ಸೋಮಣ್ಣನವರು ಒತ್ತಾಯ ಮಾಡಿದ್ದರು. ಈಗಾಗಲೇ ರೈಲ್ವೆ ಇಲಾಖೆಯಿಂದ ಕೇಂದ್ರದಲ್ಲಿ ಮಂಜೂರು ಮಾಡಿಸಿದ್ದಾರೆ. ಶ್ರೀಗಳ ಹೆಸರಿಡಲು ತಡವಾಗಿಲ್ಲ. ಸರ್ಕಾರದಲ್ಲಿ ಕೆಲವು ಪ್ರಕ್ರಿಯೆಗಳು ಇರುತ್ತವೆ. ರಸ್ತೆ, ವೃತ್ತ, ಕಟ್ಟಡಕ್ಕೆ ಹೆಸರಿಡಬೇಕಾದರೆ ಪ್ರಸ್ತಾವನೆಗಳು ಬಂದಾಗ ಪರಿಶೀಲನೆ ಮಾಡಿ, ಸಾಧಕ ಭಾದಕಗಳನ್ನ ನೋಡಿ ಸರ್ಕಾರ ಅನುಮತಿ ಕೊಡುತ್ತದೆ ಎಂದರು.

ಭಾರತಕ್ಕೆ ಬಂದ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವುರ್‌ ರಾಣಾ  – vishwanews24

ನಮ್ಮ ಕುಟುಂಬಕ್ಕೂ ಮಠಕ್ಕೂ ಅವಿನಾಭವ ಸಂಬಂಧವಿದೆ. ನಮ್ಮ ತಂದೆ ಹಾಗೂ ಹಿರಿಯ ಸ್ವಾಮೀಜಿಯವರ ಜೊತೆಗೆ ಇದ್ದಂತಹ ಸಂಬಂಧ ಯಾವಾಗಲೂ ಇರುತ್ತದೆ. ಈ ಸಂಬಂಧವನ್ನು ನಾವು ಮುನ್ನಡೆಸಿಕೊಂಡು ಹೋಗುತ್ತೇವೆ ಎಂದು ಹೇಳಿದರು

Leave a Reply