ತುಳು ಭಾಷೆಯನ್ನು ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಯಾವುದೇ ಯೋಜನೆ ಇಲ್ಲ : ಕೇಂದ್ರ ಸರಕಾರ – Vishwanews24

Featured, ರಾಷ್ಟ್ರ ನ್ಯೂಸ್

ತುಳು ಭಾಷೆಯನ್ನು ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಯಾವುದೇ ಯೋಜನೆ ಇಲ್ಲ : ಕೇಂದ್ರ ಸರಕಾರ – Vishwanews24

ನವದೆಹಲಿ: ತುಳು ಭಾಷೆಯನ್ನು ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

ಗೃಹ ಸಚಿವಾಲಯದ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಲೋಕಸಭೆ ಸಂಸದ ರಾಜಮೋಹನ್ ಉನ್ನಿತಾನ್ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಸದ್ಯದಲ್ಲಿಯೇ ಯಾವುದೇ ಸೇರ್ಪಡೆಯ ಯೋಜನೆಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜಮೋಹನ್ ಉನ್ನಿತ್ತಾನ್ ಅವರು ತುಳು ಭಾಷೆಯನ್ನು 8 ನೇ ಶೆಡ್ಯೂಲ್‌ಗೆ ಸೇರಿಸುವ ಬಗ್ಗೆ ಸರ್ಕಾರದ ನಿಲುವನ್ನು ಕೇಳಿದ್ದರು. ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಸಚಿವರು ‘ಡಾ. ಸೀತಾಕಾಂತ್ ಮೊಹಾಪಾತ್ರ ಸಮಿತಿಯು ಎಂಟನೇ ಶೆಡ್ಯೂಲ್‌ನಲ್ಲಿರುವ ಭಾಷೆಗಳನ್ನು ಒಕ್ಕೂಟದ ಅಧಿಕೃತ ಭಾಷೆಗಳಾಗಿ ಗುರುತಿಸುವ ಬಗ್ಗೆ ಯಥಾಸ್ಥಿತಿಯನ್ನು ಮುಂದುವರಿಸಬೇಕು ಎಂದು ಶಿಫಾರಸು ಮಾಡಿತ್ತು. ಪ್ರಸ್ತುತ, ಅಧಿಕೃತ ಭಾಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಪ್ರಾಯೋಗಿಕ ಅಥವಾ ಆಡಳಿತಾತ್ಮಕವಾಗಿ ಕಾರ್ಯಸಾಧ್ಯವಲ್ಲ”‌ ಎಂದು ಹೇಳಿಕೆ ನೀಡಿದ್ದಾರೆ.

ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಬೇಡಿಕೆಗಳು ಕಾಲಕಾಲಕ್ಕೆ ಬಂದಿವೆ. ಉಪಭಾಷೆಗಳು ಮತ್ತು ಭಾಷೆಗಳ ವಿಕಾಸವು ಒಂದು ಕ್ರಿಯಾತ್ಮಕ ಪ್ರಕ್ರಿಯೆಯಾಗಿದೆ. ಇದು ಸಾಮಾಜಿಕ- ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಬೆಳವಣಿಗೆಗಳಿಂದ ಪ್ರಭಾವಿತವಾಗಿರುವುದರಿಂದ ಭಾಷೆಗಳಿಗೆ ಯಾವುದೇ ಮಾನದಂಡಗಳನ್ನು ನಿಗದಿಪಡಿಸುವುದು ಕಷ್ಟ,” ಅಂತಾ ಹೇಳಿದ್ದಾರೆ. “ಭಾಷೆಗಳನ್ನು ಉಪಭಾಷೆಗಳಿಂದ ಪ್ರತ್ಯೇಕಿಸುವುದೋ ಅಥವಾ ಎಂಟನೇ ಅನುಸೂಚಿಯಲ್ಲಿ ಸಂವಿಧಾನಕ್ಕೆ ಸೇರಿಸುವುದು ಎನ್ನುವ ನಿಷ್ಕರ್ಷೆಗೆ ಬರುವುದು ಕಷ್ಟ ಸಾದ್ಯವಾಗಿದೆ,” ಅಂತಾ ಹೇಳಿದ್ದಾರೆ.

ಅಂಗನವಾಡಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ  : ಬಿ ಸಿ ನಾಗೇಶ್‌‌‌ – Vishwanews24