ದ.ಕ. ಜಿಲ್ಲೆಯಲ್ಲಿ ಸೋಮವಾರ 153 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ -Vishwanews24
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರದಂದು 153 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು, 124 ಮಂದಿ ಸೋಮವಾರದಂದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಇಂದಿನ ಪಾಸಿಟಿವ್ ಪ್ರಕರಣಗಳ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6168ಕ್ಕೆ ಏರಿಕೆಯಾಗಿದೆ. ಈ ಪೈಕಿ 3138 ಮಂದಿ ಸದ್ಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ 2854 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸೋಮವಾರವೂ ಕೂಡ 124 ಮಂದಿ ಗುಣಮುಖರಾಗಿದ್ದಾರೆ. ಇನ್ನು ಇಂದು 7 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
