ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ – vishwanews24
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (DCC) ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಿ AICC ಬುಧವಾರ ಆದೇಶ ಹೊರಡಿಸಿದೆ.
AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು, ಸಂಘಟನ್ ಸೃಜನ್ ಅಭಿಯಾನದ ಭಾಗವಾಗಿ ಈ ನೇಮಕಾತಿ ನಡೆದಿದೆ.
ಈ ಅಭಿಯಾನದಡಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಪಕ್ಷದ ಪದಾಧಿಕಾರಿಗಳು ಚರ್ಚೆ ನಡೆಸಿ, ಸಂಘಟನೆಯ ಕುರಿತು ಸಮಗ್ರ ವರದಿ ಸಲ್ಲಿಸಿದ್ದರು. ಬಳಿಕ ಎಐಸಿಸಿ ವೀಕ್ಷಕರು ಹಾಗೂ ಹಿರಿಯ ನಾಯಕರ ಚರ್ಚೆಯ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ನೇಮಕಕ್ಕೆ ಅನುಮೋದನೆ ನೀಡಲಾಗಿದೆ.
