ದರ್ಶನ್ ನ್ಯಾಯಾಂಗ ಬಂಧನ ಅವಧಿ  13 ದಿನ ವಿಸ್ತರಣೆ  – vishwanews24

Featured, ರಾಜ್ಯ ನ್ಯೂಸ್

‘ದರ್ಶನ್ ಆಂಡ್ ಗ್ಯಾಂಗ್’ ನ್ಯಾಯಾಂಗ ಬಂಧನ ಅವಧಿ  13 ದಿನ ವಿಸ್ತರಣೆ 

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಬಾರಿ ಕೋರ್ಟ್‌ 14 ದಿನಗಳವರೆಗೆ ವಿಸ್ತರಿಸಿದ್ದ ಅವಧಿಗೆ ಇಂದು ಮುಗಿದ ಹಿನ್ನೆಲೆ ಮತ್ತೆ ವಿಚಾರಣೆ ನಡೆಯಿತು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿಯಾಗಿದ್ದು, ಆತನ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಮತ್ತೆ 13 ದಿನಗಳ ಕಾಲ ವಿಸ್ತರಿಸಿದೆ.

ಬಡ, ಮಧ್ಯಮ ವರ್ಗದವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೊಬೋಟಿಕ್‌ ತಂತ್ರಜ್ಞಾನ ಚಿಕಿತ್ಸೆ : ಸಿದ್ದರಾಮಯ್ಯ – vishwanews24

ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ಸೆಪ್ಟಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಇಂದು ದರ್ಶನ್ ನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತದೆ.

ಉಡುಪಿ: ನೇಜಾರು ಕಗ್ಗೊಲೆ ಪ್ರಕರಣ ; ಅ.24ಕ್ಕೆ ವಿಚಾರಣೆ ಮುಂದೂಡಿಕೆ – vishwanews24

Leave a Reply