ದಸರಾ ಉದ್ಘಾಟನೆ : ಎಸ್ ಎಂ ಕೃಷ್ಣಗೆ ಅಧಿಕೃತ ಆಹ್ವಾನ ನೀಡಿದ ಸಿಎಂ. ಬೊಮ್ಮಾಯಿ -Vishwanews24
ದಸರಾ ಉದ್ಘಾಟನೆ : ಎಸ್ ಎಂ ಕೃಷ್ಣಗೆ ಅಧಿಕೃತ ಆಹ್ವಾನ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ -Vishwanews24
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಶನಿವಾರ ಮಾಜಿ ಮುಖ್ಯಮಂತ್ರಿ ಭೇಟಿ ನೀಡಿದ್ದು, ನಾಡ ಹಬ್ಬ ದಸರಾ ಮಹೋತ್ಸವ – 2021ರ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನಿಸಿದ್ದಾರೆ.
ಈ ಬಾರಿಯ ದಸರಾ ಉದ್ಘಾಟನೆಗೆ ಮಾಜಿ ಸಿಎಂ ಎಸ್ ಎಂ ಕೃಷ್ಣಾ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಹಿನ್ನೆಲೆ ಇಂದು ಸಿಎಂ ಬವರಾಜ ಬೊಮ್ಮಾಯಿ ಅವರು ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಆಹ್ವಾನ ನೀಡಿದರು.
ಹಿರಿಯ ಮುತ್ಸದ್ದಿ, ಚತುರ ಆಡಳಿತಗಾರ, ಅಪ್ರತಿಮ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಶ್ರೀ ಎಸ್ ಎಂ ಕೃಷ್ಣ ಅವರನ್ನು, ಅವರ ಸ್ವಗೃಹದಲ್ಲಿ ನಾಡಹಬ್ಬ ದಸರಾ ಉದ್ಘಾಟನೆಗೆ ಕರ್ನಾಟಕ ಸರ್ಕಾರದ ವತಿಯಿಂದ ಅಧಿಕೃತವಾಗಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿಯವರ ನೇತೃತ್ವದಲ್ಲಿ ಆಹ್ವಾನಿಸಲಾಯಿತು. (1/2) pic.twitter.com/fhdPYtP6WZ
— R. Ashoka (ಆರ್. ಅಶೋಕ) (@RAshokaBJP) October 2, 2021
ಈ ಸಂದರ್ಭ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, “ದಸರಾ ಉದ್ಘಾಟನೆಗೆ ಎಸ್ ಎಂ ಕೃಷ್ಣ ಅವರನ್ನು ಆಹ್ವಾನಿಸಿದ್ದೇವೆ. ಅವರು ನಮ್ಮ ಆಹ್ವಾನಕ್ಕೆ ಒಪ್ಪಿಕೊಂಡಿದ್ದಾರೆ. ಎಸ್ ಎಂ ಕೃಷ್ಣ ಅವರು ಓರ್ವ ಮುತ್ಸದ್ಧಿ ರಾಜಕಾರಣಿ” ಎಂದಿದ್ದಾರೆ.
ಈ ವೇಳೆ ಪ್ರೇಮಾ ಕೃಷ್ಣ, ಕಂದಾಯ ಸಚಿವ ಆರ್ ಅಶೋಕ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಮೈಸೂರು ಮೇಯರ್ ಸುನಂದಾ ಪಾಲನೇತ್ರ ಉಪಸ್ಥಿತರಿದ್ದರು.
ಕೋವಿಡ್ ಮಾರ್ಗಸೂಚಿಗಳೊಂದಿಗೆ ಅ. 7ರಿಂದ ಅ.16ರವರೆಗೆ ಮಂಗಳೂರು ದಸರ -Vishwanews24
