ದೀಪಾವಳಿ ಹಬ್ಬದ ದಿನ ದೇಶಾದ್ಯಂತ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ; ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

Featured, ದೇಶ
ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹತ್ತಿರ ಬರುತ್ತಿದ್ದು, ಈ ವೇಳೆ ಪಟಾಕಿ ಸಿಡಿಸುವ ಕುರಿತು ಎದುರಾಗಿದ್ದ ಗೊಂದಲ ಹಾಗೂ ಕುತೂಹಲಗಳಿಗೆ ಸುಪ್ರೀಂಕೋರ್ಟ್ ತೆರೆ ಎಳೆದಿದ್ದು, ಪಟಾಕಿ ಮಾರಾಟದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು  ಹೇಳಿದೆ.
ಪರಿಸರ ಮಾಲೀನ್ಯದ ಕಾರಣದ ದೀಪಾವಳಿ ಹಬ್ಬಕ್ಕೆ ಪಟಾಕಿ ಮಾರಾಟ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪಟಾಕಿ ಮಾರಾಟದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದೆ. ಆದರೆ, ಪಟಾಕಿ ಮಾರಾಟಕ್ಕೆ ಕೆಲ ಷರತ್ತುಗಳ ಅಗತ್ಯವಿದೆ ಎಂದು ಹೇಳಿದೆ.
ಪಟಾಕಿ ಮಾರಾಟಕ್ಕೆ ಷರತ್ತುಗಳನ್ನು ವಿಧಿಸಿರುವ ನ್ಯಾಯಾಲಯ, ಕಡಿಮೆ ಮಾಲಿನ್ಯ ಉಂಟು ಮಾಡುವ ಪಟಾಕಿಗಳಿಗೆ ಮಾತ್ರ ಅನುಮತಿ ನೀಡಿದೆ. ಅಲ್ಲದೆ, ನಿಗದಿಪಡಿಸಿದ ಪ್ರದೇಶಗಳಲ್ಲಿ ಮಾತ್ರ ಸೀಮಿತ ಸಮಯದಲ್ಲಿ ಪಟಾಕಿ ಹೊಡೆಯಲು ಅನುವು ಮಾಡಿಕೊಟ್ಟಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10ಗಂಟೆಯವರೆಗೆ ಮಾತ್ರ ಪಟಾಕಿ ಹೊಡೆಯಲು  ಅನುಮತಿ ನೀಡಿದೆ.