ದೆಹಲಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ಬೆಳ್ತಂಗಡಿ ಶಾಸಕರಿಂದ ಸ್ವಾಗತ – Vishwanews24

Featured, ರಾಷ್ಟ್ರ ನ್ಯೂಸ್

ದೆಹಲಿಯಲ್ಲಿ  ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ಬೆಳ್ತಂಗಡಿ ಶಾಸಕರಿಂದ ಸ್ವಾಗತ.

ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿ ಇಂದು ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲು ನವ ದೆಹಲಿಗೆ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್ ,ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಗಣೇಶ್ ಗೌಡ ನವೂರ್, ಶ್ರೀ ಶ್ರೀನಿವಾಸ ರಾವ್ ಧರ್ಮಸ್ಥಳ ಅವರು ಜೊತೆಗಿದ್ದರು.

Leave a Reply