ದೆಹಲಿಯಲ್ಲಿ ವಿಪಕ್ಷಗಳ ಬೃಹತ್ ಸಮಾವೇಶ : ಮೋದಿ ಸರ್ಕಾರದ ವಿರುದ್ಧ ಒಂದಾದ ವಿಪಕ್ಷಗಳು.. – Vishwanews24

Featured, ರಾಷ್ಟ್ರ ನ್ಯೂಸ್
ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, ಇಂದು ಜಂತರ್​​​ ಮಂತರ್ ​​ನಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದಾರೆ.
ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಸೇರಿದಂತೆ ಎಲ್ಲಾ ವಿಪಕ್ಷದ ನಾಯಕರು ಆಗಮಿಸಲಿದ್ದಾರೆ. ಅಲ್ಲದೇ ಈ ಬಾರಿ ಸಮಾವೇಶದ ಬೃಹತ್​​​ ರ‍್ಯಾಲಿಯನ್ನು ಸಿಎಂ ಅರವಿಂದ್​​ ಕೇಜ್ರಿವಾಲ್ ಉದ್ಘಾಟಿಸಲಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ದೇಶವನ್ನು ರಕ್ಷಿಸಲು​​​​​​ ಈ ಸಮಾವೇಶ ನಡೆಸುತ್ತಿದ್ದೇವೆ. ಸಂಯುಕ್ತ ಭಾರತ ಕಟ್ಟಲು ಮೈತ್ರಿಕೂಟ ಅತ್ಯಗತ್ಯ. ಕೇಂದ್ರ ಸರ್ಕಾರದ ವಿರುದ್ಧ ಇಲ್ಲಿ ಕಾಂಗ್ರೆಸ್​​ ಸೇರಿದಂತೆ ಪ್ರಾದೇಶಿಕ ಪಕ್ಷಗಳ ಶಕ್ತಿ ಪ್ರದರ್ಶನ ಮಾಡುತ್ತೇವೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ಎಲ್ಲದಕ್ಕೂ ಸಿದ್ದವಾಗಿದ್ದೇವೆ. ಈ ಬಾರಿ ಮೋದಿಯವರನ್ನು ಸೋಲಿಸಲು ಪಣತೊಟ್ಟಿದ್ದೇವೆ ಎಂದು ಸಿಎಂ ಮಮತಾ ಬ್ಯಾನರ್ಜಿಯವರು ಪತ್ರಿಕಾಗೋಷ್ಠಿ ನಡೆಸಿ  ತಿಳಿಸಿದ್ದಾರೆ
ಇನ್ನು ಎನ್​​ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಇದರ ನಿಗದಿತ ಸಮಯ ಮುಗಿದಿದೆ. ಲೋಕಸಭೆ ಚುನಾವಣೆಯ ದಿನಾಂಕವೂ ಮುಂದಿನ 15 ದಿನಗಳಲ್ಲಿ ತಿಳಿಯಲಿದೆ. ಈ ಫ್ಯಾಸಿಸ್ಟ್​​ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇವೆ. ಇಲ್ಲಿಯೇ ಹೊಸ ಸರ್ಕಾರವೊಂದನ್ನು ರಚಿಸಲಿದ್ದೇವೆ. ದೇಶವನ್ನು ಅಭಿವೃದ್ದಿಯ ಪಥದಲ್ಲಿ ಕೊಂಡೊಯ್ಯಬೇಕು. ನಮ್ಮ ನೆಲದಲ್ಲಿ ಪ್ರಜಾಪ್ರಭುತ್ವ ಮತ್ತು ಸಮಗ್ರತೆ ಜೀವಂತವಾಗಿರಬೇಕು ಎಂದು ದೀದಿ ಹೇಳಿದ್ದಾರೆ.