ದೇವಾಲಯಗಳ ಹಣ, ಚರ್ಚ್ ಹಾಗೂ ಗುರುದ್ವಾರಗಳಿಗೆ ನೀಡುತ್ತಿರುವ ಅನುದಾನವನ್ನು ರಾಜ್ಯ ಬಿಜೆಪಿ ಸರ್ಕಾರ ಮುಂದುವರಿಸಬೇಕು : ಸಿದ್ದರಾಮಯ್ಯ – Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್, ರಾಜ್ಯ ನ್ಯೂಸ್

ದೇವಾಲಯಗಳ ಹಣ, ಚರ್ಚ್ ಹಾಗೂ ಗುರುದ್ವಾರಗಳಿಗೆ ನೀಡುತ್ತಿರುವ ಅನುದಾನವನ್ನು ರಾಜ್ಯ ಬಿಜೆಪಿ ಸರ್ಕಾರ ಮುಂದುವರಿಸಬೇಕು : ಸಿದ್ದರಾಮಯ್ಯ – Vishwanews24

ಬೆಂಗಳೂರು : ಹಿಂದೂ ಧಾರ್ಮಿಕ ಸಂಸ್ಥೆ  ಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಅನ್ಯ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್‌ ರೂಪದಲ್ಲಿ ಹಣ ನೀಡುವು ದನ್ನು ತಡೆ ಹಿಡಿಯಲು ಆದೇಶ ಮಾಡಿರುವುದಾಗಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿರುವ ಬೆನ್ನಿಗೆ ಸಿದ್ದರಾಮಯ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವಿಟ್ ಮೂಲಕ ಆಕ್ರೊಶ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ದೇವಾಲಯಗಳಿಗೆ ನೀಡುವ ತಸ್ತೀಕ್ ಹಣ, ಮಸೀದಿ, ಚರ್ಚ್ ಹಾಗೂ ಗುರುದ್ವಾರಗಳಿಗೆ ನೀಡುತ್ತಿರುವ ಅನುದಾನವನ್ನು ರಾಜ್ಯ ಬಿಜೆಪಿ ಸರ್ಕಾರ ಮುಂದುವರಿಸಬೇಕು ಎಂದಿದ್ದಾರೆ.

ಕೋವಿಡ್ ಸಂಕಷ್ಟ ಯಾರನ್ನೂ ಬಿಟ್ಟಿಲ್ಲ, ಹೀಗಿರುವಾಗ ಜಾತಿ, ಧರ್ಮದ ಆಧಾರದ ಮೇಲೆ ವಿಂಗಡಣೆ ಮಾಡುವುದು ಸರಿಯಲ್ಲ ಎಂದು ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.