ದೇವಾಲಯಗಳಲ್ಲಿ ಅಂಗಿ ಬನಿಯನ್ ತೆಗೆದು ದೇವರ ದರ್ಶನ ಮಾಡುವುದಕ್ಕೆ ಭಾರೀ ಆಕ್ಷೇಪ ; ಫಲಕ ತೆರವಿಗೆ ಮನವಿ – Vishwanews24

Featured, ಉಡುಪಿ, ದಕ್ಷಿಣ ಕನ್ನಡ

ದೇವಾಲಯಗಳಲ್ಲಿ ಅಂಗಿ ಬನಿಯನ್ ತೆಗೆದು ದೇವರ ದರ್ಶನ ಮಾಡುವುದಕ್ಕೆ ಭಾರೀ ಆಕ್ಷೇಪ..

ಹಿಂದೂ ಸಂಪ್ರದಾಯದಲ್ಲಿ ಇಂತಹ ಪದ್ದತಿ ಇಲ್ಲ ..

ಇದು ಸಂವಿಧಾನ ಮೂಲಭೂತ ಹಕ್ಕಿನ ಉಲ್ಲಂಘನೆ..

ಕುಕ್ಕೆ ಸುಬ್ರಮಣ್ಯ, ಕೊಲ್ಲೂರು ದೇವಾಲಯದ ವಿರುದ್ಧ ದೂರು ..

ಫಲಕ ತೆರವಿಗೆ ಮನವಿ..

ಮಂಗಳೂರು : ದೇವಾಲಯಗಳಲ್ಲಿ ಅಂಗಿ ಬನಿಯನ್ ತೆಗೆದು ದೇವರ ದರ್ಶನ ಮಾಡುವುದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದ್ದು, ಫಲಕ ತೆರವಿಗೆ ಮನವಿ ಮಾಡಲಾಗಿದೆ. ಈ ಕುರಿತು ಧಾರ್ಮಿಕ ದತ್ತಿ ಇಲಾಖೆಗೆ ಲಿಖಿತ ದೂರು ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕುಕ್ಕೆ ಸುಬ್ರಮಣ್ಯ ದೇವಾಲಯ, ಕೊಲ್ಲೂರು ಮೂಕಾಂಬಿಕಾ ದೇವಾಲಯದ ವಿರುದ್ಧ ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಧಾರ್ಮಿಕ ದತ್ತಿ ಇಲಾಖೆಗೆ ಲಿಖಿತ ದೂರು ನೀಡಿದೆ.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಹಿಂದೂ ಸಂಪ್ರದಾಯದಲ್ಲಿ ಇಂತಹ ಪದ್ದತಿ ಇಲ್ಲ, ದಿವ್ಯಾಂಗರು ಬಟ್ಟೆ ಕಳಚಿ ದರ್ಶನ ಪಡೆಯುವುದು ಕಷ್ಟವಾಗುತ್ತದೆ. ಚರ್ಮರೋಗವಿದ್ದವರು ಅಂಗಿ ಕಳಚಿದರೆ ಚರ್ಮರೋಗ ಬೇರೆಯವರಿಗೂ ಹರಡುವ ಸಾಧ್ಯತೆ ಇದೆ. ಇದು ಸಂವಿಧಾನ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಕೂಡಲೇ ದೇವಾಲಯಗಳಲ್ಲಿ ಅಂಗಿ ಬನಿಯನ್ ತೆಗೆದು ದೇವರ ದರ್ಶನ ಮಾಡಬೇಕು ಎಂಬ ಸೂಚನಾ ಫಲಕ ತೆರವುಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

Leave a Reply