ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ಎಲ್ಲರೂ ನಾಶ ಆಗ್ತಾರೆ :  ಹೆಚ್‌ಡಿಕೆ – vishwanews24

Featured, ರಾಜ್ಯ ನ್ಯೂಸ್

ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ಎಲ್ಲರೂ ನಾಶ ಆಗ್ತಾರೆ :  ಹೆಚ್‌ಡಿಕೆ

ಬೆಂಗಳೂರು: ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಎಲ್ಲರೂ ನಾಶ ಆಗುತ್ತಾರೆ. ಈಗ ಅದೇ ಆಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ. ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಗೃಹಲಕ್ಷ್ಮಿ ನಿರಂತರ ಪ್ರಕ್ರಿಯೆ ; ಯೋಜನೆ ನಿಲ್ಲಿಸುವ ಮಾತೇ ಇಲ್ಲ : ಲಕ್ಷ್ಮಿ ಹೆಬ್ಬಾಳ್ಕರ್‌ – vishwanews24

ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪಿಸಿದ ಅವರು, ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್‌ಐಆರ್ ಆಗಿದೆ. ಅವರ ವಿರುದ್ಧ ತನಿಖೆ ಮಾಡಬೇಕು ಎಂದು ಸವಾಲು ಹಾಕಿದ ಅವರು ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ.

ಜ್ವರಕ್ಕೆ ಓವರ್ ಡೋಸ್ ಇಂಜೆಕ್ಷನ್ ; ವೈದ್ಯನ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ – vishwanews24

Leave a Reply