ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇದೆ ಎನ್ನುವುದೇ ಗೊತ್ತಾಗುತ್ತಿಲ್ಲ : ಕೆ ಎಸ್ ಈಶ್ವರಪ್ಪ -Vishwanews24
ದಾವಣಗೆರೆ: ಕಾಂಗ್ರೆಸ್‌ನವರಿಗೆ ತಮ್ಮ ನಾಯಕರು ಯಾರೆಂದೇ ಗೊತ್ತಿಲ್ಲ ಎಂದು ಪಂಚಾಯತ್ ರಾಜ್ಯ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪಹೇಳಿದರು.
ಉಸ್ತುವಾರಿ ಸಚಿವರಾಗಿ ನೇಮಕವಾದ ಬಳಿಕ ಇದೇ ಮೊದಲ ಬಾರಿ ಜಿಲ್ಲೆಗೆ ಭೇಟಿ ನೀಡಿ, ಪಂಚಾಯತ್ ರಾಜ್ಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು?, ವಿಧಾನಸಭೆ ಪ್ರತಿಪಕ್ಷದ ನಾಯಕರು ಯಾರು ಎನ್ನುವುದೇ ಕಾಂಗ್ರೆಸ್‌ನವರಿಗೆ ಗೊತ್ತಿಲ್ಲ ಎಂದು ಲೇವಡಿ ಮಾಡಿದರು.
ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇದೆ ಎನ್ನುವುದೇ ಗೊತ್ತಾಗುತ್ತಿಲ್ಲ. ಕೆಜೆಪಿ ಹಾಗೂ ಬಿಜೆಪಿ ಪಕ್ಷ ಒಡೆದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದರು. ತಾವೇ ದೇವರಾಜ ಅರಸು ಎಂಬಂತೆ ಬಿಂಬಿಸಿಕೊಳ್ಳಲು ಯತ್ನಿಸಿದರು. ಆದರೆ, ಅದು ಸುಳ್ಳಾಗಿದೆ. ಈಗ ಕಾಂಗ್ರೆಸ್ ಪಕ್ಷವನ್ನು ಹುಡುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.
