ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ – vishwanews24
ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ
ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರಿಂದು ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಗಮಿತ ರಾಜ್ಯಪಾಲರಾದ ಜಗದೀಪ್ ಧನ್ಕರ್ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 10ಗಂಟೆ ಸುಮಾರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.
