ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗಂಡಾಂತರ ಒದಗಿ ಬಂದಿದೆ : ದಿನೇಶ್ ಗುಂಡೂರಾವ್ -Vishwanews24
ಬೆಂಗಳೂರು:ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ನಡೆಸಲು ಹಾಗೂ ರಾಜ್ಯಾದ್ಯಂತ ಬಿಜೆಪಿ ಕುತಂತ್ರದ ಬಗ್ಗೆ ಜನಾಭಿಪ್ರಾಯ ಮೂಡಿಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲು ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗಂಡಾಂತರ ಒದಗಿ ಬಂದಿದೆ. ಹೀಗಾಗಿ ಬಿಜೆಪಿ ಷಡ್ಯಂತ್ರವನ್ನು ಎಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕಾಗಿದೆ. ಕೇಂದ್ರ ಸರ್ಕಾರದ ವಂಚನೆ, ಮೋಸಕ್ಕೆ ತಕ್ಕ ಉತ್ತರ ನೀಡಲು ಜನಾಭಿಪ್ರಾಯ ಮೂಡಿಸುತ್ತೇವೆ. ಪ್ರತಿಯೊಂದನ್ನೂ ಜನರಿಗೆ ತಿಳಿಸುವ ಕೆಲಸ ಮಾಡಲು ಸಭೆಯಲ್ಲಿ ನಿರ್ಧರಿಸಿದ್ದೇವೆ ಎಂದು ಹೇಳಿದರು.
