ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷವೇ ತುಂಬಾ ಬಲಿಷ್ಠ : ಡಿ.ಕೆ.ಶಿ -Vishwanews24
ನವದೆಹಲಿ: , ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷವೇ ತುಂಬಾ ಬಲಿಷ್ಠವಾಗಿದೆ ಎಂದು ಡಿ.ಕೆ.ಶಿವಕುಮಾರ್ ಅವರು ವಿಡಿಯೋ ಸಂದೇಶವನ್ನು ನೀಡಿದ್ದಾರೆ.
2017ರಲ್ಲಿ ನೋಟ್ ಬ್ಯಾನ್ ಸಂದರ್ಭ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಬುಧವಾರದಂದು ದೆಹಲಿ ಕೋರ್ಟ್ ಗೆ ಹಾಜರು ಪಡಿಸಲಾಗಿದ್ದು, ಸೆಪ್ಟೆಂಬರ್ 13ರ ತನಕ ಅವರನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲು ಕೋರ್ಟ್ ಆದೇಶ ನೀಡಿದೆ.
ಡಿಕೆ ಶಿವಕುಮಾರ್ ಅವರನ್ನು ಮಂಗಳವಾರದಂದು ಸಂಜೆ ಬಂಧಿಸಲಾಗಿತ್ತು. ಬಳಿಕ ಆರೋಗ್ಯದಲ್ಲಿ ಉಂಟಾದ ಏರುಪೇರಿನಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬುಧವಾರ ಮಧ್ಯಾಹ್ನ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿದೆ. ವಾದ ಪ್ರತಿವಾದ ಆಲಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ೧೦ ದಿನಗಳ ಕಾಲ 10 ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
2 ವರ್ಷದ ಹಿಂದೆ ದೆಹಲಿ ಫ್ಲ್ಯಾಟ್ ಗಳಲ್ಲಿ ಸಿಕ್ಕ ರೂ.8.5 ಕೋಟಿ ಪ್ರಕರಣ ಸಂಬಂಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಪಿಎಂಎಲ್ಎ ವಿಶೇಷ ನ್ಯಾಯಾಲಯವು 10 ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಈ ವಿಡಿಯೋ ಸಂದೇಶವನ್ನು ಸ್ವತಃ ಡಿಕೆ. ಶಿವಕುಮಾರ್ ಅವರ ಸಾಮಾಜಿಕ ಜಾಲತಾಣದ ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ.
Political Vendetta has become more stronger than the law in this country pic.twitter.com/Ylo7QhBkKn
— DK Shivakumar (@DKShivakumar) September 4, 2019
