ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ , ಆಕ್ಸಿಜನ್ ಹಾಗೂ ಐಸಿಯು ಹಾಸಿಗೆಗಳ ಕೊರತೆಗೆ ಸರ್ಕಾರವೇ ಹೊಣೆ : ರಾಹುಲ್ ಗಾಂಧಿ -Vishwanews24
ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ , ಆಕ್ಸಿಜನ್ ಹಾಗೂ ಐಸಿಯು ಹಾಸಿಗೆಗಳ ಕೊರತೆಗೆ ಸರ್ಕಾರವೇ ಹೊಣೆ : ರಾಹುಲ್ ಗಾಂಧಿ -Vishwanews24
ನವದೆಹಲಿ, : ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಪ್ರಕರಣ ಸೇರಿದಂತೆ ಆಕ್ಸಿಜನ್ ಹಾಗೂ ಐಸಿಯು ಹಾಸಿಗೆಗಳ ಕೊರತೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕೊರೊನಾ ಸೋಂಕಿನ ಕಾರಣದಿಂದ ಮಾನವನ ದೇಹದಲ್ಲಿ ಆಕ್ಸಿಜನ್ನ ಕೊರೆತೆಯಾಗಬಹುದು. ಆದರೆ, ಇದು ಆಕ್ಸಿಜನ್ ಹಾಗೂ ಐಸಿಯು ಹಾಸಿಗೆಗಳ ಕೊರತೆಯಿಂದ ಆಗಿದೆ. ಇದಕ್ಕೆ ಸರ್ಕಾರವೇ ಹೊಣೆ. ಈ ಕಾರಣದಿಂದ ಹಲವಾರು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.
Corona can cause a fall in oxygen level but it’s #OxygenShortage & lack of ICU beds which is causing many deaths.
GOI, this is on you.
— Rahul Gandhi (@RahulGandhi) April 23, 2021
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,32,730 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು 1,62,63,695ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 2,263 ಮಂದಿ ಸಾವನ್ನಪ್ಪಿದ್ದು, ಒಟ್ಟು 1,86,920ಕ್ಕೆ ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಮಂಗಳೂರು : ಮದುವೆಯಲ್ಲಿ ಭಾಗವಹಿಸಲು ಅನುಮತಿ ಪತ್ರಕ್ಕಾಗಿ ನನ್ನ ಕಚೇರಿ ಸಂಪರ್ಕಿಸಿ : ಶಾಸಕ ಕಾಮತ್ -Vishwanews24
