ದೇಶದಲ್ಲೇ ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನಾಗಿಸುವ ಯೊಜನೆ ರಾಜ್ಯ ಸರ್ಕಾರದಿಂದ ಅನುಷ್ಠಾನ : ಸಚಿವ ಡಾ.ಕೆ.ಸುಧಾಕರ್ – Vishwanews24

Featured, ರಾಜ್ಯ ನ್ಯೂಸ್

ದೇಶದಲ್ಲೇ ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನಾಗಿಸುವ ಯೊಜನೆ ರಾಜ್ಯ ಸರ್ಕಾರದಿಂದ ಅನುಷ್ಠಾನ : ಸಚಿವ ಡಾ.ಕೆ.ಸುಧಾಕರ್ – Vishwanews24

ಚಿಕ್ಕಬಳ್ಳಾಪುರ ( Vishwanews24 ) : ಮೊದಲ ಹಂತದಲ್ಲಿ ರಾಜ್ಯದಲ್ಲಿನ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ದೇಶದಲ್ಲೇ ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನಾಗಿಸುವ ಯೊಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಪೆರೇಸಂದ್ರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಅವರು ಶಿಲಾನ್ಯಾಸ ಮಾಡುವ ಮೂಲಕ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

25 ಸಾವಿರ ಚದರ ಅಡಿಯಲ್ಲಿ ತಲಾ ಸುಮಾರು 9 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಿನದ 24 ಗಂಟೆಯು ಗುಣಮಟ್ಟದ ಆರೋಗ್ಯ ಸೌಲಭ್ಯ ದೊರಕಲಿದ್ದು,ಈಗಿರುವ 6 ಹಾಸಿಗೆಗಳ ಬದಲಾಗಿ 12 ಹಾಸಿಗೆಗಳ ವ್ಯವಸ್ಥೆ ಇರಲಿದೆ.ಒಬ್ಬ ವೈದ್ಯರ ಬದಲಾಗಗಿ ಮೂವರು ವೈದ್ಯರು ಇರುತ್ತಾರೆ. ದಾದಿಯರು,ತಾಂತ್ರಿಕ ಸಹಾಯಕರು,ಡಿ-ದರ್ಜೆ ನೌಕರರು ಸೇರಿದಂತೆ ಈಗಿರುವ ಎಲ್ಲಾ ಹುದ್ದೆಗಳ ಸಂಖ್ಯೆಗಳು ದ್ವಿಗುಣವಾಗಲಿವೆ. ವೈದ್ಯಾಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿಯೂ ಕೇಂದ್ರದಲ್ಲೆ ಉಳಿದು ಕೊಳ್ಳಲು ವಸತಿ ಗೃಹಗಳನ್ನು ನಿರ್ಮಿಸಲಾಗುತ್ತದೆ, ಕಡ್ಡಾಯವಾಗಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ವಸತಿ ಗೃಹಗಳಲ್ಲೇ ವಾಸವಿದ್ದು ಪಾಳಿ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸಬೇಕಾಗಿರುತ್ತದೆ.ಒಟ್ಟಾರೆ ಸುಸಜ್ಜಿತ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಿ ದೇಶದಲ್ಲೇ ಮಾದರಿಯಾದ ಗುಣಮಟ್ಟದ ಆರೋಗ್ಯ ಸೇವೆ ನೀಡುವುದು ಸರ್ಕಾರದ ಆಶಯವಾಗಿದೆ ಎಂದರು.

ಇದನ್ನೂ ಓದಿ :

ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್‌ ಸಿದ್ಧಾಂತ ಒಪ್ಪಿ ನಮ್ಮ ಪಕ್ಷಕ್ಕೆ ಬಂದರೆ ಸೇರಿಸಿಕೊಳ್ಳಲಾಗುವುದು : ಸಿದ್ದರಾಮಯ್ಯ -Vishwanews24

ಜಿಲ್ಲೆಯಲ್ಲಿ ಸದ್ಯಕ್ಕೆ ನಿರ್ಮಾಣವಾಗುತ್ತಿರುವ ಈ 3 ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಾಮಗಾರಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 30 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿನ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ದೇಶದಲ್ಲೇ ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನಾಗಿಸಲಾಗುವುದು. ಈ ಮಹತ್ವಾಕಾಂಕ್ಷಿ ಯೊಜನೆಯ ಭಾಗವಾಗಿ ಇಂದು ಜಿಲ್ಲೆಯ ಪೆರೇಸಂದ್ರ,ಮಂಡಿಕಲ್ಲು ಮತ್ತು ದಿಬ್ಬೂರು ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಮಾಡಲಾಗಿದ್ದು,ಮುಂದಿನ ಸಂಕ್ರಾಂತಿ ವೇಳೆಗೆ ಈ ಕೇಂದ್ರಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ನಮ್ಮ ಜಿಲ್ಲೆಯ ಜನರ ಆಶೋತ್ತರಗಳಿಗನುಗುಣವಾಗಿ ವೈದ್ಯಕೀಯ ಶಿಕ್ಷಣ ಸಂಸ್ಥೆ ಮತ್ತು 700 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕನಸು ನನಸಾಗುವ ದಿನಗಳು ಹತ್ತಿರವಾಗಿದ್ದು,2021-22 ನೇ ಸಾಲಿನಲ್ಲೆ ಸರ್ಕಾರಿ ವೈದ್ಯಕೀಯ ಕಾಲೇಜು ತಾತ್ಕಾಲಿಕ ವ್ಯವಸ್ಥೆಯಲ್ಲಿ ಮೊದಲು ಬಾಡಿಗೆ ಕಟ್ಟಡದಲ್ಲಿ ಜಿಲ್ಲೆಯಲ್ಲಿ ಆರಂಭವಾಗಲಿದೆ.ನಿರ್ಮಾಣ ಹಂತದಲ್ಲಿರುವ ವೈದ್ಯಕೀಯ ಕಾಲೇಜಿನ ಕಟ್ಟಡ ಬಳಕೆಗೆ ಲಭ್ಯವಾದ ಕೂಡಲೆ ಉದ್ಘಾಟನೆಯಾಗಿ ಶಾಶ್ವತವಾಗಿ ಜಿಲ್ಲಾ ಕೇಂದ್ರದಲ್ಲಿ (ಅರೂರು ಗ್ರಾ.ಪಂ ವ್ಯಾಪ್ತಿಯಲ್ಲಿ) ನಡೆಯಲಿದೆ. ಒಟ್ಟಾರೆ 2021-22 ಶೈಕ್ಷಣಿಕ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಿರುವ ವೈದ್ಯಕೀಯ ಶಿಕ್ಷಣ ಕಲಿಕಾ ವಿದ್ಯಾರ್ಥಿಗಳಿಗೆ ಇದರ ಲಾಭ ಈ ವರ್ಷವೇ ದೊರಕಲಿದೆ. ಈ ವರ್ಷವೇ 100 ವಿದ್ಯಾರ್ಥಿಗಳು ಪ್ರವೇಶ ಪಡೆಯಲಿದ್ದು,ಮುಂದಿನ ದಿನಗಳಲ್ಲಿ 50 ಸೀಟುಗಳು ಮಂಜೂರಾಗಿ ಪ್ರತಿ ವರ್ಷ 150 ವಿದ್ಯಾರ್ಥಿ ಸಾಮರ್ಥ್ಯದ ವೈದ್ಯಕೀಯ ಕಾಲೇಜಾಗಿ ಹೊರಹೊಮ್ಮಲಿದೆ.ಈ ಸಂಸ್ಥೆಯನ್ನು ರಾಷ್ಟ್ರದಲ್ಲೆ ಅತ್ಯುನ್ನತ ದರ್ಜೆಯ ವೈದ್ಯಕೀಯ ಶಿಕ್ಷಣ ಸಂಸ್ಥೆಯನ್ನಾಗಿ ಬೆಳೆಸಲಾಗುವುದು ಎಂದರು.

ಇದನ್ನೂ ಓದಿ :

ಕಾರ್ಕಳ: ಗೋಕಳ್ಳತನ ನಡೆಸುವವರು, ಸಹಕರಿಸುವವರನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ : ಪೊಲೀಸರಿಗೆ ಸಚಿವ ಸುನಿಲ್‌ ಕುಮಾರ್‌ – Vishwanews24

 

Leave a Reply