ದೇಶದಾದ್ಯಂತ ಇ-ಸಿಗರೇಟ್ ನಿಷೇಧ : ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ ಸರ್ಕಾರ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ : ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್ ಅವರಿಗೆ, ಇ-ಸಿಗರೇಟ್ ಮತ್ತು ವೇಪಿಂಗ್ ಉತ್ಪನ್ನಗಳನ್ನು ದೇಶದ್ಲಲಿ ಸಂಪೂರ್ಣವಾಗಿ ನಿಷೇಧಿಸಬೇಕೆಂದು ಮನವಿ ಮಾಡಿದ್ದರು. ಇಂತಹ ಮನವಿ ಪುರಸ್ಕರಿಸಿರುವ ಕೇಂದ್ರ ಸರ್ಕಾರ, ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇ-ಸಿಗರೇಟ್ ನಿಷೇಧಕ್ಕೆ ಒಪ್ಪಿಗೆ ಸೂಚಿಸಿದೆ. ಈ ಮೂಲಕ ದೇಶದಾದ್ಯಂತ ಇ-ಸಿಗರೇಟ್ ನಿಷೇಧಿಸಿ, ಸುಗ್ರೀವಾಜ್ಞೆ ಹೊರಡಿಸಿದೆ.

ಇ-ಸಿಗರೇಟ್‌ನ ಉತ್ಪಾದನೆ, ತಯಾರಿಕೆ, ಆಮದು, ರಫ್ತು, ಸಾಗಾಟ, ಮಾರಾಟ, ವಿತರಣೆ, ಸಂಗ್ರಹಣೆ ಹಾಗೂ ಜಾಹೀರಾತು ಎಲ್ಲವನ್ನೂ ನಿಷೇಧಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇಂತಹ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ, ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘ ಇ-ಸಿಗರೇಟ್ ನಿಷೇಧಕ್ಕೆ ಸಲ್ಲಿಸಲಾಗಿದ್ದ ಮನವಿಯ ಪ್ರಸ್ತಾಪ ಕೂಡ ನಡೆಸಿದಸಿದ ಕೇಂದ್ರ ಸರ್ಕಾರ, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಇ-ಸಿಗರೇಟ್ ಅನ್ನು ದೇಶಾದ್ಯಂತ ನಿಷೇಧಿಸಿದಿ ಸುಗ್ರೀವಾಜ್ಞೆಯನ್ನು ಹೊರಡಿಸಿದೆ.