ಧರ್ಮಸ್ಥಳ: KSRTC ಬಸ್  ಡಿಕ್ಕಿ :- ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ – Vishwanews24

Featured, ದಕ್ಷಿಣ ಕನ್ನಡ

ಧರ್ಮಸ್ಥಳ: KSRTC ಬಸ್  ಡಿಕ್ಕಿ ಹೊಡೆದು ಓರ್ವ ಸಾವು, ಮಗು ಸೇರಿ 7 ಮಂದಿ ಗಂಭೀರ

ಧರ್ಮಸ್ಥಳ:ರಾಜ್ಯ ಸಾರಿಗೆ ಬಸ್ಸೊಂದು ಬೊಲೆರೋದಿಂದ ಇಳಿದು ನಿಂತಿದ್ದವರಿಗೆ ಹಾಗೂ ಬೊಲೆರೋ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು , ಮಗು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ನಡೆದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬದಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು. ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂತಿದ್ದವರಿಗೆ ಹಾಗೂ ಬೊಲೋರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಅತಿಯಾದ ನಂಬಿಕೆ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24 

ಘಟನೆಯಲ್ಲಿ ಮಂಡ್ಯ ಜಿಲ್ಲೆಯ ಚೆನ್ನಸಂದ್ರ ನಿವಾಸಿ ಮಹದೇವ(63) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ಜನ ಮಹಿಳೆಯರು , ಓರ್ವ ಗಂಡಸು ,ಒಂದು ಮಗು ಸೇರಿ ಏಳು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Leave a Reply