ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ SSLC ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು – Vishwanews24

Featured, ದಕ್ಷಿಣ ಕನ್ನಡ

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ SSLC ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ.

ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.

ಮಂಗಳೂರು, : ಶ್ರೀರಾಮನಿಗೆ  ಅವಹೇಳನ ; ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು -Vishwanews24

ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಈಕೆಗೆ ಡ್ರಾಯಿಂಗ್ ಶಿಕ್ಷಕ ಇಲ್ಲಸಲ್ಲದ ಆರೋಪ ಮಾಡಿ ಇನ್ನೊಂದು ವಿದ್ಯಾರ್ಥಿನಿಗೆ ಮಾಡಿದ ಮೆಸೇಜ್ ನಿಂದ ಅವಮಾನಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Leave a Reply