ನ.16ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನಕ್ಕೆ ಹೈಕೋರ್ಟ್‌ ಷರತ್ತುಬದ್ಧ ಅನುಮತಿ – vishwanews24

Featured, ರಾಜ್ಯ ನ್ಯೂಸ್

ನ.16ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನಕ್ಕೆ ಹೈಕೋರ್ಟ್‌ ಷರತ್ತುಬದ್ಧ ಅನುಮತಿ

ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್ 16ರಂದು ಆರೆಸ್ಸೆಸ್ ಪಥ ಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿ ಆದೇಶಿಸಿದೆ.

ಆರೆಸ್ಸೆಸ್ ಅಕ್ಟೋಬರ್ 19ರಂದು ನಡೆಸಲುದ್ದೇಶಿಸಿದ್ದ ಪಥ ಸಂಚಲನಕ್ಕೆ ಚಿತ್ತಾಪುರ ತಹಶೀಲ್ದಾರ್ ಕಾನೂನು ಸುವ್ಯವಸ್ಥೆ ಕಾರಣ ನೀಡಿ ಅನುಮತಿ ನಿರಾಕರಿಸಿದ್ದರು. ಈ ಆದೇಶ ಕುರಿತು ಆರೆಸ್ಸೆಸ್ ಪರ ಅರ್ಜಿದಾರ ಅಶೋಕ್ ಪಾಟೀಲ್ ಕಲಬುರಗಿ ಹೈಕೋರ್ಟ್ ಪೀಠದ ಮೆಟ್ಟಿಲೇರಿದ್ದರು.

ದೆಹಲಿ ಬಾಂಬ್ ಸ್ಫೋಟ :  ಕಾರು ಚಲಾಯಿಸುತ್ತಿದ್ದುದು ಉಮರ್ ; ಡಿಎನ್​ಎ ಪರೀಕ್ಷೆಯಲ್ಲಿ ದೃಢ – vishwanews24

ನ್ಯಾ.ಎಂ.ಜಿ.ಎಸ್ ಕಮಲ್ ಅವರಿದ್ದ ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿ, ಆರೆಸ್ಸೆಸ್ ಪಥ ಸಂಚಲನಕ್ಕೆ ಷರತ್ತುಬದ್ಧವಾಗಿ ಅನುಮತಿ ನೀಡಿ ಆದೇಶ ಹೊರಡಿಸಿದೆ.

25 ಮಂದಿ ಬ್ಯಾಂಡ್ ಸದಸ್ಯರನ್ನು ಸೇರಿದಂತೆ 300 ಗಣವೇಷಧಾರಿಗಳನ್ನು ಒಳಗೊಂಡ ಒಟ್ಟು 325 ಮಂದಿಗೆ ಪಥ ಸಂಚಲನಕ್ಕೆ ಅವಕಾಶ ನೀಡಿ ಆದೇಶಿಸಿದೆ.

ಕಾರ್ಕಳ: ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆ ; ಓರ್ವನ ಬಂಧನ  – vishwanews24

Leave a Reply