ನ. 3 ರವರೆಗೆ ಸುರತ್ಕಲ್ ಟೋಲ್ ಪ್ಲಾಜಾ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ – Vishwanews24

Featured, ದಕ್ಷಿಣ ಕನ್ನಡ

ನ. 3 ರವರೆಗೆ ಸುರತ್ಕಲ್ ಟೋಲ್ ಪ್ಲಾಜಾ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಪ್ಲಾಜಾ ಸುತ್ತಮುತ್ತಲು 200 ಮೀಟರ್ ವ್ಯಾಪ್ತಿಯಲ್ಲಿ ಅಕ್ಟೋಬರ್ 28 ರ ಬೆಳಿಗ್ಗೆ 6 ರಿಂದ ನವೆಂಬರ್ 3 ರ ಸಂಜೆ 6 ರವರೆಗೆ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಘೋಷಿಸಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ನಿರ್ಬಂಧಕಾಜ್ಞೆ ಜಾರಿಯಲ್ಲಿರುವ ಸಮಯದಲ್ಲಿ ಈ ಕೆಳಕಂಡ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.

1 ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಯಾ ಪದ ಹಾಡುವುದು, ಬೇರೆ ಮಾಡುವುದು ಸಂಜೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಪ್ರಸಾರ ಮಾಡುವುದು, ಪುಕಟಣಾ ಪತ್ರಿಕೆಗಳ ಯಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.

2 ಐದು ಮತ್ತು ಅದಕ್ಕಿಂತ ಹೆಚ್ಚು ಜನರು ಒಟ್ಟಾಗಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

3 ಶಸ್ತ್ರಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಬಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು, ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

ಮಣಿಪಾಲ: ಕಾರಿನ ಮೇಲೆ ಪಟಾಕಿ ಇಟ್ಟು ಸಿಡಿಸಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲು – Vishwanews24

4 ಪಟಾಕಿಗಳನ್ನು ಸಿಡಿಸುವುದು, ಯಾವುದೇ ಮಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

5 ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ.

6 ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.

7 ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ/ಸಿಬ್ಬಂಧಿಗಳ ವಿರುದ್ಧ ನಿಂಧಿಸುವಂತಹ ಅವಹೇಳನಕಾರಿಯಾದಂತಹ ಯಾವುದೇ ಘೋಷಣೆಗಳು/ಭಾಷಣಗಳು ಪ್ರಕಟಣೆಗಳು ಅವಾಚ್ಯ ಶಬ್ದಗಳ ಬಳಿಕ ಪ್ರಚೋದನಾಕಾರಿ ಭಾಷಣ/ಗಾಯನ ಇತ್ಯಾಧಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

8 ಯಾವುದೇ ಖಾಸಗಿ ಜಾತಿ/ಧರ್ಮ/ ಕೋಮು/ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಕತೆಗೆ ಭಾದಕ ಉಂಟು ಮಾಡುವುದನ್ನು ನಿಷೇಧಿಸಲಾಗಿದೆ.

8 ಯಾವುದೇ ಖಾಸಗಿ ಜಾತಿ/ಧರ್ಮ/ ಕೋಮು/ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಕತೆಗೆ ಭಾದಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ..ನೋಡಿ ಇಂದಿನ ದಿನ ಭವಿಷ್ಯ – Vishwanews24

9. ಯಾವುದೇ ತರಹದ ಮೆರವಣಿಗೆ, ಪ್ರತಿಭಟನೆ, ರಸ್ತೆ ತಡೆ ಜಾಥ ಮುಂತಾದ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಈ ನಿರ್ಬಂಧಕಾಜ್ಞೆಯು ಜಾರಿಯಲ್ಲಿರುವ ಪುದೇಶದಲ್ಲಿ ಸರ್ಕಾರದಿಂದ ಯಾ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Leave a Reply