ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ – vishwanews24

Featured, ರಾಜ್ಯ ನ್ಯೂಸ್

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ

ಬೆಂಗಳೂರು: ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಅವರು ಆಯ್ಕೆಯಾಗಿದ್ದಾರೆ.

ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಅವರು ಎಕ್ಸ್‌ ಖಾತೆಯಲ್ಲಿ ಈ ಸಂಬಂಧ ಪೋಸ್ಟ್‌ ಹಂಚಿಕೊಂಡಿದ್ದಾರೆ. ಬಮೂಲ್‌ ಕುಟುಂಬಕ್ಕೆ ನಟಿ ಸುಧಾರಾಣಿ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.

ನಂಬಿಕೆಯ ಮೇಲೆ ನಿರ್ಮಿತವಾದ ನಂದಿನಿಯು ರೈತರ ಮೇಲಿನ ಬದ್ಧತೆ, ಶುದ್ಧ ಹಾಗೂ ಗುಣಮಟ್ಟದ ಪೌಷ್ಟಿಕ ಆಹಾರದೊಂದಿಗೆ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply